Breaking News

ಜೈಲಿನಲ್ಲಿರುವ ವಂಚಕ ಯುವರಾಜ ಸ್ವಾಮಿಯಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಗೆ ದೂರವಾಣಿ ಕರೆ?

Spread the love

ಬೆಂಗಳೂರು: ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ಅರವಿಂದ ಬೆಲ್ಲದ ಅವರದ್ದು. ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕರಾಗಿರುವ ಅರವಿಂದ ಬೆಲ್ಲದ ಅವರನ್ನು ಕೆಲವರು ಮುಂದಿನ ಮುಖ್ಯಮಂತ್ರಿ ಎಂದೂ ಬಿಂಬಿಸುತ್ತಿದ್ದಾರೆ. ದೆಹಲಿ ಭೇಟಿ- ಆರ್ ಎಸ್‌ಎಸ್ ನಾಯಕ ಭೇಟಿ ಎಂದು ಸದ್ಯ ಕೆಲವು ದಿನಗಳಿಂದ ಪ್ರಚಾರದಲ್ಲಿರುವ ಬೆಲ್ಲದ ಅವರಿಗೆ ವಂಚಕ ಜೈಲಿನಲ್ಲಿರುವ ವಂಚಕ ಯುವರಾಜ್ ಸ್ವಾಮಿಯಿಂದ ಕರೆಗಳು ಬರುತ್ತಿದೆಯಂತೆ!

ಈ ಬಗ್ಗೆ ಸ್ವತಃ ಶಾಸಕ ಅರವಿಂದ ಬೆಲ್ಲದ ಅವರು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. “ನನಗೆ ಇತ್ತೀಚೆಗೆ ಒಂದು ದೂರವಾಣಿ ಸಂಖ್ಯೆಯಿಂದ ಪದೇ ಪದೇ ಕರೆ ಬರುತ್ತಿದ್ದು, ಯಾರೆಂದು ಕೇಳಿದರೆ, ‘ನಾನು ಸ್ವಾಮಿ ಅಂತಾ ಮಾತನಾಡುವುದು, ಯಾವ ಸ್ವಾಮಿ ಎಂದು ಕೇಳಿದರೆ ‘ಯುವರಾಜ್ ಸ್ವಾಮಿ’ ಎಂದು ಹೆಸರು ಹೇಳುತ್ತಿದ್ದಾನೆ. ಆದರೆ ಆತ ಜೈಲಿನಲ್ಲಿದ್ದಾನೆ. ನನಗೆ ಮಾತ್ರವಲ್ಲದೆ ನನ್ನ ಆಪ್ತ ಸಹಾಯಕರ ದೂರವಾಣಿಗೂ ಪದೇ ಪದೇ ಕರೆಗಳು ಬರುತ್ತಿದೆ” ಎಂದು ಬೆಲ್ಲದ ಅವರು ಪತ್ರದಲ್ಲಿ ಬರೆದಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ