Breaking News
Home / ಜಿಲ್ಲೆ / ಬೆಂಗಳೂರು / ಜುಲೈ ತಿಂಗಳಾಂತ್ಯಕ್ಕೆ ಬೆಂಗಳೂರು ನಗರಕ್ಕೆ ಹೊಸ ಕಮೀಷನರ್ ನೇಮಕ?

ಜುಲೈ ತಿಂಗಳಾಂತ್ಯಕ್ಕೆ ಬೆಂಗಳೂರು ನಗರಕ್ಕೆ ಹೊಸ ಕಮೀಷನರ್ ನೇಮಕ?

Spread the love

ಬೆಂಗಳೂರು,: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದೇ ರೀತಿ ರಾಜಧಾನಿ ಬೆಂಗಳೂರಿನ ಪೊಲೀಸ್ ಆಯುಕ್ತರು ಕೂಡ ಬದಲಾಗುವ ಮಾಹಿತಿ ಚರ್ಚೆಗೆ ನಾಂದಿ ಹಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗಾಗಿ ಪೈಪೋಟಿ ಶುರುವಾಗಿದೆ. ನೂತನ ನಗರ ಪೊಲೀಸ್ ಆಯುಕ್ತರು ಯಾರಾಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಎರಡನೇ ಸಲ ಸದ್ದು ಮಾಡುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದಾರೆ. ರಾಜ್ಯದ ಮೂಲೆ ಮೂಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಆಗುತ್ತಿದೆ. ಒಂದು ವೇಳೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆದರೆ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆ ಸೇರಿದಂತೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಹುದ್ದೆಯಲ್ಲೂ ಭಾರೀ ಬದಲಾವಣೆ ಆಗಲಿದೆ. ನಾಯಕತ್ವ ಬದಲಾಗಲೀ, ಬದಲಾಗದಿರಲೀ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಯಂತೂ ಬದಲಾಗಲಿದೆ ಎಂದೇ ಹೇಳಲಾಗುತ್ತಿದೆ.

ರಮೇಶ್ ಜಾರಕಹೊಳಿ ಸಿಡಿ ಪ್ರಕರಣ ಸೇರಿದಂತೆ ಹಲವು ಮಹತ್ವದ ಪ್ರಕರಣಗಳ ತನಿಖೆ ಮುಗಿದ ಕೂಡಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಚಿಂತನೆ ಮಾಡಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆ ಅಲಂಕರಿಸಿ ಕಮಲಪಂತ್ ಒಂದು ವರ್ಷ ಪುರ್ಣಗೊಳ್ಳುತ್ತಿದೆ. ಆಗಸ್ಟ್ ವೇಳೆಗೆ ಕೆಲವು ಪ್ರಕಣಗಳ ತನಿಖೆ ಪೂರ್ಣಗೊಳಿಸಲು ಡೆಡ್ ಲೈನ್ ನೀಡಲಾಗಿದೆ. ಜುಲೈ ತಿಂಗಳಾಂತ್ಯಕ್ಕೆ ಕಮಲಪಂತ್ ಪೊಲೀಸ್ ಆಯುಕ್ತರ ಹುದ್ದೆಯಿಂದ ನಿರ್ಗಮಿಸಲಿದ್ದಾರೆ ಎನ್ನಲಾಗಿದೆ.

ಕಮಲಪಂತ್ ನಿರ್ಗಮನದಿಂದ ಖಾಲಿಯಾಗಲಿರುವ ಹುದ್ದೆಗೆ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ನೇಮಕವಾಗಲಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಅಧಿಕಾರ ವಹಿಸಿಕೊಂಡ ಕೂಡಲೇ ಬಿ. ದಯಾನಂದ್ ಅವರಿಗ ಗುಪ್ತಚರ ಇಲಾಖೆ ಜವಾಬ್ಧಾರಿ ವಹಿಸಲಾಗಿತ್ತು. ಆಪರೇಷನ್ ಕಮಲದ ಬಳಿಕ ಅಸ್ತಿತ್ವಕ್ಕೆ ಬಂದ ಯಡಿಯೂರಪ್ಪ, ಗುಪ್ತಚರ ಜವಾಬ್ಧಾರಿಯನ್ನು ಬಿ. ದಯಾನಂದ್ ಅವರಿಗೆ ವಹಿಸಲಾಗಿದೆ. ಅಷ್ಟೇ ಪ್ರಾಮಾಣಿಕವಾಗಿ ಅವರು ಹುದ್ದೆಯನ್ನು ನಿರ್ವಹಣೆ ಮಾಡಿದ್ದರು. ಇದೀಗ ಅವರ ಸೇವೆ ಪರಿಗಣಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಅಪಘಾತಗಳಿಗೆ ನಿತ್ಯ 30 ಸಾವು

Spread the love ಬೆಂಗಳೂರು : ರಸ್ತೆ ಅಪಘಾತಗಳಲ್ಲಿ ಸಂಭವಿಸುವ ನಾವು ನೋವುಗಳ ಶ್ರೀ ಸಂಖ್ಯೆ ಹೆಚ್ಚಾಗುತ್ತಲೇ ಸಾಗಿವೆ. ರಾಜ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ