Breaking News
Home / ರಾಜಕೀಯ / ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

Spread the love

ಬನಹಟ್ಟಿ: ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ ಸಂಜೆ 97000 ಕ್ಯೂಸೆಕ್ ನೀರು ಬಂದಿದೆ. ಜಲಾಶಯದ ಹೊರ ಹರಿವು 96 ಸಾವಿರ ಕ್ಯೂಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ 521ಮೀಟರ್ ಇದ್ದು, ಜಲಾಶಯದಲ್ಲಿ 2.62 ಟಿಎಂಸಿ ನೀರಿನ ಸಂಗ್ರಹವಿದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ನದಿಯು ಅಪಾಯ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ. ಈಗಾಗಲೇ ತಾಲೂಕು ಆಡಳಿತ ಘಟಪ್ರಭಾ ಹಾಗೂ ಕೃಷ್ಣಾನದಿ ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ನದಿ ಪಾತ್ರದ ಜನರು, ತಮ್ಮ ಪಾತ್ರೆ ಹಾಗೂ ಜಾನವಾರಗಳ ಸಮೇತ ಸುರಕ್ಷತಾ ಸ್ಥಳಗಳಿಗೆ ತೆರಳಬೇಕು ಎಂದು ತಹಶೀಲ್ದಾರ ಮನವಿ ಮಾಡಿದ್ದಾರೆ.

ಮಹಾರಾಷ್ಟ್ರದ ಕೊಯ್ನಾ : 142 ಮಿ.ಮೀ, ವಾರಣಾ:80 ಮಿ.ಮೀ ದೂಧಗಂಗಾ: 185 ಮಿ.ಮೀ, ರಾಧಾ ನಗರಿ 220 ಮಿ.ಮೀ ಸೇರಿದಂತೆ ಇನ್ನೀತರ ಪ್ರದೇಶದಲ್ಲಿ ಸಾಕಷ್ಟು ಮಳೆಯಾದ ವರದಿಯಾಗಿದೆ.

ಬೋಟ್ ಸೇವೆ ಬಂದ್: ಕೃಷ್ಣಾ ನದಿಯಲ್ಲಿ ನೀರಿನ ಹರಿವು ತೀವ್ರವಾಗಿರುವುದರಿಂದ ರಬಕವಿ-ಬನಹಟ್ಟಿ, ಹಾಗೂ ಮುಧೋಳ ತಾಲ್ಲೂಕಿನಿಂದ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸೇವೆ ಕಲ್ಪಿಸುತ್ತಿದ್ದ ಬೋಟ್ ಸೇವೆಯನ್ನು ಬಂದು ಮಾಡಲಾಗಿದೆ.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ