Breaking News

ಕಾರವಾರದಲ್ಲಿ ಸ್ಯಾಟಲೈಟ್ ಫೋನ್ ಆಯಕ್ಟೀವ್; ಹೆಚ್ಚಿದ ಆತಂಕ

Spread the love

ಬೆಂಗಳೂರು: ಕಾರವಾರದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಆಗಿದ್ದು, ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದೆ.

ಕಾರವಾರದ ಶಿರವಾಡ ಸಮೀಪದ ಜಾಂಬಾ ಗ್ರಾಮದ ಐದು ಕಿಲೋಮಿಟರ್ ವ್ಯಾಪ್ತಿಯಲ್ಲಿ ಈ ಸ್ಯಾಟಲೈಟ್​​ ಫೋನ್ ಬಳಕೆಯಾಗಿದೆ ಎನ್ನಲಾಗಿದೆ. ಈ ಸಂಬಂಧ ಕೇಂದ್ರ ಆಂತರಿಕ ಭದ್ರತಾ ವಿಭಾಗ(ಐಎಸ್‌ಡಿ)ದಿಂದ ತನಿಖೆ ಪ್ರಾರಂಭವಾಗಿದೆ. ಕಳೆದ ಸೋಮವಾರದಿಂದ ಸ್ಯಾಟಲೈಟ್​ ಫೋನ್ ಸತತವಾಗಿ ಟ್ರಾಕ್ ಆಗುತ್ತಿದೆ ಅಂತಾ ಹೇಳಲಾಗಿದೆ.

ತನಿಖಾಧಿಕಾರಿಗಳು ಅರಣ್ಯ ಇಲಾಖೆ ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ಶುರುಮಾಡಿದ್ದಾರೆ. ಈವರೆಗೆ ಜಿಲ್ಲೆಯ ಕಾರವಾರ, ಯಲ್ಲಾಪುರ, ಸಿದ್ದಾಪುರ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಬಾರಿ ಫೋನ್ ಟ್ರ್ಯಾಕ್ ಆಗಿದೆ. ಕೈಗಾ ಅಣುಸ್ಥಾವರ, ನೌಕಾನೆಲೆ ಭದ್ರತೆ ದೃಷ್ಟಿಯಿಂದ ಐಎಸ್​ಡಿ ತನಿಖೆಯನ್ನ ಶುರುಮಾಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ