Breaking News

ಗೋವಾ : ವ್ಯಾಕ್ಸಿನ್ ಪಡೆಯದೇ ಇದ್ರೆ ಪ್ರವಾಸಿಗರಿಗೆ ನೋ ಎಂಟ್ರಿ..!

Spread the love

ಗೋವಾ : ಪ್ರವಾಸಿಗರ ಹಾಟ್ ಫೇವರೇಟ್ ತಾಣವಾಗಿರುವ ಗೋವಾಗೆ ಪ್ರವಾಸಿಗರು ವಿಸಿಟ್ ಮಾಡ್ಬೇಕಂದ್ರೆ ಇನ್ಮುಂದೆ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಬೇಕು.. ಅಲ್ಲದೇ ರಾಜ್ಯದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಜುಲೈ 30ರೊಳಗೆ ಶೇ.100ರಷ್ಟು ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ನನ್ನು ರಾಜ್ಯವ್ಯಾಪಿ ನೀಡುವ ಗುರಿಯನ್ನು ಗೋವಾ ಸರ್ಕಾರ ಹೊಂದಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್‍ನನ್ನು ರಾಜ್ಯದಲ್ಲಿ ಪೂರ್ಣಗೊಳಿಸುವವರೆಗೆ ಪ್ರವಾಸೋದ್ಯಮವನ್ನು ಆರಂಭಿಸುವ ಯಾವುದೇ ಯೋಜನೆ ಇಲ್ಲ. ಜುಲೈ 30ರೊಳಗೆ ಅದನ್ನು ಪೂರ್ಣಗೊಳಿಸುವುದು ನಮ್ಮ ಗುರಿ ಎಂದು ಹೇಳಿದ್ದಾರೆ.

 

ಪ್ರವಾಸೋದ್ಯಮ ನಿರ್ದೇಶಕರಿಗೆ ಪ್ರಮೋದ್ ಸಾವಂತ್‍ರವರು ಗೋವಾ ಪ್ರವೇಶಕ್ಕಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕೆಂದು ಸೂಚಿಸಿದರು. ಪ್ರವಾಸಿಗರಿಗೆ ಸಂಪರ್ಕ ತಡೆ ಹಾಗೂ ನೃತ್ಯ, ಸಂಗೀತ ಕಾರ್ಯಕ್ರಮಗಳನ್ನು ಮಾರ್ಚ್ 2022ರವರೆಗೆ ಮುಂದೂಡಬೇಕೆಂದು ತಿಳಿಸಿದ್ದಾರೆ.

 

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ