Breaking News

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

Spread the love

ಬೆಂಗಳೂರು: ಎಂಟು ಕೋಟಿ ರೂ. ಮೌಲ್ಯದ ತಿಮಿಂಗಲದ ಅಂಬರ್‌ಗ್ರೀಸ್‌ ವೀರ್ಯ ಅನ್ನು ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳಿಗೆ ಅಂಬರ್‌ ಗ್ರೀಸ್‌ ಅನ್ನು ಕೊಟ್ಟ ಕೋಲಾರ ಮೂಲದ ಆರೋಪಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಪ್ರಕರಕಣದಲ್ಲಿ ಈಗಾಗಲೇ ಮಾಗಡಿ ಮುಖ್ಯರಸ್ತೆಯ ಸೈಯದ್‌ ತಜ್ಮುಲ್‌ ಪಷಾ(54), ಪ್ಯಾಲೇಸ್‌ ಗುಟ್ಟಹಳ್ಳಿಯ ಸಲೀಂ ಪಾಷಾ (48), ನಾಸೀ ಪಾಷಾ(34) ಮತ್ತು ಜೆ.ಪಿ.ನಗರದ ರಫೀ ಉಲ್ಲಾ ಶರೀಫ್ (45) ಅವರನ್ನು ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಕೋಲಾರದ ಸಲ್ಮಾನ್‌ ಎಂಬಾತ ಅಂಬರ್‌ ಗ್ರೀಸ್‌ ಕೊಟ್ಟಿರುವುದಾಗಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಕೆ.ಜಿ.ಹಳ್ಳಿ ಠಾಣೆ ಇನ್‌ಸ್ವೆಕ್ಟರ್‌ ಸಂತೋಷ್‌ ನೇತೃತ್ವದ ತಂಡ ಆರೋಪಿಗಾಗಿ ಶೋಧಿಸಿದಾಗ ಆತ ಹೊರರಾಜ್ಯದಲ್ಲಿ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೃತಪಟ್ಟಿರುವ ಬಗ್ಗೆ ಖಚಿತಪಡಿಸಲು ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳ ಪೊಲೀಸರಿಗೆ ಮಾಹಿತಿ ನೀಡುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೋಲಾರ ಮೂಲದ ಸಲ್ಮಾನ್‌ ವಿರುದ್ಧ ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲಿ ವಂಚನೆ, ಡ್ರಗ್ಸ್‌ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದು ಗೊತ್ತಾಗಿದೆ. ನೆರೆ ರಾಜ್ಯಗಳಲ್ಲಿ ಮೃತಪಟ್ಟಿರುವುದಾಗಿ ಶಂಕೆಯಿದ್ದು ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆಯಾ ರಾಜ್ಯಗಳ ಪೊಲೀಸರಿಗೆ ಮಾಹಿತಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ : ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಅಂಬರ್‌ಗ್ರೀಸ್‌ ತಿಮಿಂಗಲದ ವೀರ್ಯ ವಿಶೇಷತೆ
ಅಂಬರ್‌ಗ್ರೀಸ್‌ ಎಂಬುದು ತಿಮಿಂಗಿಲದ ಪಡೆದ ವೀರ್ಯವಾಗಿದ್ದು, ಘನ ಮೇಣದ ವಾಸನೆಯಿಂದ ಕೂಡಿರುತ್ತದೆ. ಈ ವಸ್ತುವನ್ನು ಸುಗಂಧ ದ್ರವ್ಯ ಮತ್ತು ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಅದಕ್ಕೆ ಅರಬ್, ಚೀನಾ ಮತ್ತು ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ ಸುಮಾರು ಒಂದೂವರೆ ಕೋಟಿ ರೂ. ಮೌಲ್ಯಯುಳ್ಳದಾಗಿದೆ. ಆರೋಪಿಗಳು ಯಾರಿಗೆ ಮಾರಾಟಕ್ಕೆ ಮುಂದಾಗಿದ್ದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಅಂಬರ್‌ಗ್ರೀಸ್‌ ಅನ್ನು ವನ್ಯಜೀವಿ ಕಾಯ್ದೆ ಅಡಿಯಲ್ಲಿ ನಿಷೇಧಿಸಲಾಗಿದೆ. ಮಾರುಕಟ್ಟೆಯಲ್ಲಿ ಇದನ್ನು ಮಾರಾಟ ಮಾಡುವುದು ಕಾನೂನು ಬಾಹಿರವಾಗಿದೆ. ಹೀಗಾಗಿ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ