ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹಾರೈಸಿದ್ದಾರೆ.
ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬರದೆ ಇದ್ದರು. ಸೋಂಕು ದೃಢಪಟ್ಟಿದೆ. ಆದ ಕಾರಣ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮ್ಮ ನಾಯಕ ಕೊರೊನಾ ಸೋಂಕಿನಿಂದ ಶೀಘ್ರದಲ್ಲೇ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸಿದ್ದಾರೆ.
Laxmi News 24×7