Breaking News

ಅರುಣ್ ಸಿಂಗ್ ಬಂದುಹೋದ ಬಳಿಕ ಜಾಲಿ ಮೂಡ್ ನಲ್ಲಿದ್ದಾರೆ ಸಿಎಂ ಯಡಿಯೂರಪ್ಪ

Spread the love

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿದ ಕಾರಣ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿ ಮೂರು ದಿನ ಚರ್ಚೆ ಮಾಡಿ ಹೋಗಿದ್ದಾರೆ. ಕೆಲವು ಶಾಸಕರ ಜೊತೆ ವೈಯಕ್ತಿಕವಾಗಿ ಮಾತನಾಡಿರುವ ಅರುಣ್ ಸಿಂಗ್ ಸದ್ಯ ದೆಹಲಿಗೆ ತೆರಳಿದ್ದಾರೆ. ಆದರೆ ಇದಾದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಲಿ ಮೂಡ್ ನಲ್ಲಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿ ತೆರಳುವಾಗ ಸಚಿವ ಅಶೋಕ್ ಗೆ “ಎಲ್ಲಿಗೆ ಹೋಗ್ತಾ ಇದ್ದೀಯಾ ಎಂದರು. ಇದಕ್ಕೆ ‘ಸರ್, ಲಾಯರ್ ನೋಡಬೇಕು, ಮನೆಗೆ ಹೋಗ್ತೀನಿ‌ ಎಂದು ಅಶೋಕ್ ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ “ಏನು.. ನಿನ್‌ ಮೇಲೆ ಕೇಸ್ ಹಾಕಿದ್ದಾರಾ..!? ಎಂದು ತಮಾಷೆ ಮಾಡಿ ನಕ್ಕರು.

“ಲಕ್ಷ್ಮಣ ಸವದಿ ಮೇಲೆ ಕೇಸ್ ಹಾಕಬೇಕು, ದಾರಿ ತಪ್ಪುತ್ತಿದ್ದಾರೆ ಎಂದ ಅಶೋಕ್ ಹೇಳಿದಾಗ, “ನಿನ್ನ ಸ್ನೇಹಿತನ ರಕ್ಷಣೆ ಮಾಡೋದು ನಿನ್ನ ಕೆಲಸ ಅಲ್ವಾ., ಮಾಡು’ ಎಂದು‌ ಯಡಿಯೂರಪ್ಪ ನಗೆ ಚಟಾಕಿ ಹಾರಿಸಿದರು. ಯಡಿಯೂರಪ್ಪ ಮಾತಿಗೆ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವ ಅಶೋಕ್ ನಕ್ಕರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ