Breaking News

ನೀರಾವರಿ ಟೆಂಡರ್‌ ₹2000 ಕೋಟಿ ಕಿಕ್‌ ಬ್ಯಾಕ್‌ ಆರೋಪ ತನಿಖೆಯಾಗಲಿ: ಎಚ್‌ಡಿಕೆ

Spread the love

ಬೆಂಗಳೂರು: 2006ರಲ್ಲಿ ಸಿಎಂ ಆಗಿದ್ದಾಗ ನನ್ನ ಮೇಲೆ ಬಿಜೆಪಿ ನಾಯಕರು ಮಾಡಿರುವ ಗಣಿ ಲಂಚ ಆರೋಪ ತನಿಖೆಯನ್ನು ಸ್ವತಃ ನಾನೇ ಲೋಕಾಯುಕ್ತಕ್ಕೆ ನೀಡಿ ಪಾರದರ್ಶಕತೆ ಮೆರೆದಿದ್ದೆ. ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ವಿರುದ್ಧ ಸ್ವಪಕ್ಷೀಯರಿದಂಲೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಲಾಗಿದೆ. ಈ ಕುರಿತು ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ₹150ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ಈಗಿನ ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ₹2000 ಕೋಟಿ ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ?’ ಎಂದು ಕೇಳಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

Spread the loveಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ