Breaking News
Home / ಜಿಲ್ಲೆ / ಬೆಂಗಳೂರು / ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಅರುಣ್​ ಸಿಂಗ್ ಬೆಂಗಳೂರು ಭೇಟಿ: HDK ಟ್ವೀಟ್

‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಅರುಣ್​ ಸಿಂಗ್ ಬೆಂಗಳೂರು ಭೇಟಿ: HDK ಟ್ವೀಟ್

Spread the love

ಬೆಂಗಳೂರು: ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಬೆಂಗಳೂರು ಭೇಟಿ ಬಗ್ಗೆ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ಭಿನ್ನಮತ ಶಮನಕ್ಕೆ ಬಂದಿದ್ದ ಹೈಕಮಾಂಡ್‌ನ ಬಡಪಾಯಿ ಪ್ರತಿನಿಧಿಯ ಕೆಲಸ ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಎಂದಿದ್ದಾರೆ. ಇವರು ಜಗಳ ಬಿಡಿಸಲು ಬಂದಿದ್ದಾ? ಜಗಳ ಹಚ್ಚಲು ಬಂದಿದ್ದಾ?ಪ್ರಧಾನಿ ಮೋದಿ ಪೌರುಷವೇನಿದ್ದರೂ ಪಾಕ್​ ವಿರುದ್ಧವಷ್ಟೇ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಬಂಡುಕೋರ ಮರಿಗಳಿರಲಿ… ನರೇಂದ್ರ ಮೋದಿಯವರದ್ದು ಉತ್ತರ ಕುಮಾರನ ಪೌರುಷ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಸಾರಾಂಶ ಹೀಗಿದೆ:
ಮುಖ್ಯಮಂತ್ರಿಗಳು ಮತ್ತು ಅವರ ಮಗನ ವಿರುದ್ಧ ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಶಾಸಕರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳದೆ ಮೌನವಾಗಿರುವುದು ನೋಡಿದರೆ ಒಂದೋ @BJP4India ಹೈಕಮಾಂಡ್ ಈ ಆರೋಪಗಳನ್ನು ಒಪ್ಪಿಕೊಂಡಿದೆ, ಇಲ್ಲವೇ ಭ್ರಷ್ಟಾಚಾರದ ಹೇಸಿಗೆಯಲ್ಲಿ ಅದೂ ಕೂಡಾ ಪಾಲು ಪಡೆದಿದೆ ಎಂದೇ ಅರ್ಥವಲ್ಲವೇ?

ರಾಜ್ಯ @BJP4Karnataka ಸರ್ಕಾರದ ಭಿನ್ನಮತ ಶಮನಕ್ಕೆ ಬಂದಿದ್ದ ಹೈಕಮಾಂಡ್‌ನ ಬಡಪಾಯಿ ಪ್ರತಿನಿಧಿಯ ಕೆಲಸ ‘ಬಂದ ಪುಟ್ಟಾ..ಹೋದ ಪುಟ್ಟಾ’ ಎಂಬಂತಾಗಿದೆ. ಈ ಪ್ರತಿನಿಧಿ ಜಗಳ ಬಿಡಿಸಲು ಬಂದಿದ್ದಾ? ಜಗಳ ಹಚ್ಚಲು ಬಂದಿದ್ದಾ?

ಪ್ರಧಾನಿ @narendramodi ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ಧ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಬಂಡುಕೋರ ಮರಿಗಳಿರಲಿ.. ಮೋದಿಯವರದ್ದು ಉತ್ತರಕುಮಾರನ ಪೌರುಷ.

ಮುಖ್ಯಮಂತ್ರಿಗಳು ಮತ್ತು ಮಗನ ವಿರುದ್ಧದ ಆರೋಪ ಇದೇ ಮೊದಲ ಬಾರಿ ಕೇಳಿಬಂದದ್ದಲ್ಲ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಒಂದು ವರ್ಷದಿಂದ ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆಗೈಯ್ಯುತ್ತಾ ಬಂದಿದ್ದಾರೆ. ಇನ್ನೊಬ್ಬ ಶಾಸಕ ಸಿ.ಪಿ.ಯೋಗೀಶ್ವರ್ ಅವರೂ ಇದಕ್ಕೆ ದನಿಗೂಡಿಸಿದ್ದಾರೆ. ಈ ಎಲ್ಲ ಆರೋಪಗಳ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಯಬೇಕು.

ಈಗಿನ @BJP4Karnataka ಸರ್ಕಾರದ ರೂವಾರಿಯೇ ತಾನೆಂದು ಹೇಳಿಕೊಳ್ಳುತ್ತಿರುವ ಶಾಸಕ ಎಚ್.ವಿಶ್ವನಾಥ್ ಅವರೇ ಈ ಸರ್ಕಾರವನ್ನು ‘ಗುತ್ತಿಗೆದಾರರ ಸರ್ಕಾರ’ ಎಂದು ಬಣ್ಣಿಸಿರುವುದು ನೋಡಿದರೆ ಅವರ ಬಳಿ ಬೇರೆ ಸಚಿವರ ಭ್ರಷ್ಟಾಚಾರದ ಮಾಹಿತಿಯೂ ಇದ್ದ ಹಾಗಿದೆ. ಎಸಿಬಿ ಅವರನ್ನೂ ಕರೆದು ವಿಚಾರಣೆಗೆ ಒಳಪಡಿಸಿದರೆ ಸತ್ಯ ಬಯಲಿಗೆ ಬರಬಹುದು.

ನಗರದ ಬಿಐಇಸಿಯಲ್ಲಿ ನಿರ್ಮಿಸಲಾಗಿದ್ದ ಕೋವಿಡ್ ಕೇರ್ ಸೆಂಟರ್ ನ ಹಾಸಿಗೆ ಮತ್ತು ಬೆಡ್ ಗಳ ಖರೀದಿ-ಮಾರಾಟದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಭ್ರಷ್ಟಾಚಾರ ಎಸಗಿದ್ದಾರೆ ಮತ್ತು ಭೂಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಎಚ್.ವಿಶ್ವನಾಥ್ ಅವರ ಇನ್ನೊಂದು ಆರೋಪದ ಬಗ್ಗೆಯೂ ತನಿಖೆ ನಡೆಯಬೇಕು.

ಎರಡು ಕಾರಣಗಳಿಗಾಗಿ ಈ ಆರೋಪ ಗಂಭೀರ ಸ್ವರೂಪದ್ದಾಗಿದೆ. ಮೊದಲನೆಯದಾಗಿ ಆರೋಪ ನೇರವಾಗಿ @CMofKarnataka ಅವರ ಮಗನ ಮೇಲಿದೆ. ಎರಡನೆಯದಾಗಿ ಆಡಳಿತ ಪಕ್ಷದ ಶಾಸಕರೇ ಆರೋಪ ಮಾಡಿದ್ದಾರೆ. ತರಾತುರಿಯಲ್ಲಿ ನೀರಾವರಿ ಇಲಾಖೆ ಸ್ಪಷ್ಟನೆ ನೀಡಿದ್ದನ್ನು ನೋಡಿದರೆ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಸ್ಪಷ್ಟವಾಗಿದೆ.

ಭದ್ರಾ ಮೇಲ್ದಂಡೆ ಕಾಮಗಾರಿಯ ರೂ. 20,000 ಕೋಟಿ ಟೆಂಡರ್ ನಲ್ಲಿ ಬಿ.ವೈ ವಿಜಯೇಂದ್ರ 10% ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಶಾಸಕ ಎಚ್.ವಿಶ್ವನಾಥ್ ಆರೋಪವನ್ನು ಭ್ರಷ್ಟಾಚಾರ ನಿರೋಧ ದಳ (ಎಸಿಬಿ)ದ ತನಿಖೆಗೆ ಒಪ್ಪಿಸಬೇಕು ಎಂದು @CMofKarnataka ಅವರನ್ನು ಆಗ್ರಹಿಸುತ್ತೇನೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ