ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದಿದ್ದ ಪತಿ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ.
ಕಾಡಪ್ಪ ಪ್ರದಾನಿ ರಂಗಾಪಪುರೆ(48), ಹೆಣ್ಣುಮಕ್ಕಳಾದ ಕೀರ್ತಿ(18) ಹಾಗೂ ಸ್ಪೂರ್ತಿ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಾರದ ಹಿಂದೆ ಚೆನ್ನವ್ವ ರಂಗಾಪುರೆ ಸಾವನ್ನಪ್ಪಿದ್ದರು. ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ ಪಿ ಮನೋಜ ನಾಯಿಕ, ಸಿಪಿಐ ಆರ್.ಆರ್. ಪಾಟೀಲ, ಪಿಎಸ್ ಐ ರಾಕೇಶ ಬಗಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಂದೆ ಮಕ್ಕಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕಬ್ಬೂರ ಪ್ರಾಥಮಿಕ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದು. ನಂತರ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಸ್ಥಳೀಯರು ತಿಳಿಸಿದರು.
ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7