Breaking News
Home / ರಾಜ್ಯ / ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ.

ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ.

Spread the love

ಮುಂಬೈ: ರಾತ್ರಿಯಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ಮಹಾನಗರಿ ಮುಂಬೈ ತತ್ತರಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ ಆಗಸ್ಟ್ 4 ಮತ್ತು 5 ದಿನ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಮಹಾನಗರ ಪಾಲಿಕೆ, ಎನ್‍ಡಿಆರ್‍ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಲರ್ಟ್ ಆಗಿರುವಂತೆ ಸರ್ಕಾರ ಸೂಚಿಸಿದೆ. ಮಂಗಳವಾರ ಬೆಳಗಿನ ಜಾವ ಮೂರು ಗಂಟೆಗೆ ಮುಂಬೈ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮಳೆ ಆರಂಭಗೊಂಡಿದೆ. ಮುಂಬೈನ ಕೆಲ ಪ್ರದೇಶಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಗೋರೇಗಾಂವ್, ಕಿಂಗ್ ಸರ್ಕಲ್. ಹಿಂದ್‍ಮಾತಾ, ದಾದರ್, ಶಿವಾಜಿ ಚೌಕ, ಶೆಲ್ ಕಾಲೋನಿ, ಕುರ್ಲಾ ಎಸ್‍ಟಿ ಡಿಪೋ, ಬಾಂದ್ರಾ ಟಾಕೀಸ್ ಮತ್ತು ಸೈನ್ ರೋಡ್ ಪ್ರದೇಶಗಳು ಜಲಾವೃತಗೊಂಡಿವೆ. ಸಮುದ್ರದಲ್ಲಿ 4.5 ಮೀಟರ್ ಎತ್ತರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಬೀಚ್ ಗೆ ಸಾರ್ವಜನಿರಕ ಪ್ರವೇಶ ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ