Breaking News

ಹಂತ ಹಂತವಾಗಿ ಶಾಲಾ ಕಾಲೇಜು ತೆರೆಯಲು ತಜ್ಞರ ಸಮಿತಿ ಸೂಚನೆ: ಸಿಎಂ ಬಿಎಸ್ ವೈ

Spread the love

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಶಾಲೆ- ಕಾಲೇಜು ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ತಜ್ಞರ ಸಮಿತಿಯ ಸಭೆಯ ಬಳಿಕ ಮಾತನಾಡಿದ ಸಿಎಂ, ಕೊವಿಡ್ ನಂತರ ಆರೊಗ್ಯ ಸಮಸ್ಯೆ ಕಡೆಗೆ ಗಮನ ಹರಿಸಬೇಕು. 18 ವರ್ಷಕ್ಕಿಂತ ಹಿರಿಯ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿ ನಂತರ ಹಂತ ಹಂತವಾಗಿ ಕಾಲೇಜು ತೆರೆಯಲು ಸೂಚನೆ ನೀಡಿದ್ದಾರೆ ಎಂದರು.

ಕೋವಿಡ್ ಮೂರನೇ ಅಲೆ ಬಗ್ಗೆ ಚರ್ಚೆ ಮಾಡಲಾಗಿದೆ. ಜಿಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಘಟಕ ಸ್ಥಾಪನೆ ಮಾಡಲಾಗುವುದು. ಮಾನವ ಸಂಪನ್ಮೂಲ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳು, ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವಕ್ಕೆ ಸಲಹೆ ನೀಡಲಾಗಿದೆ. ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಲು ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ