Breaking News

ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ: ರೌಡಿಶೀಟರ್‌ನ ಕುತ್ತಿಗೆ ಸೀಳಿ ಬರ್ಬರ ಕೊಲೆ!

Spread the love

ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್‌ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ.

ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್‌ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸೈಯದ್‌ ಇನ್ನೋರ್ಚ ರೌಡಿ ಅನೀಸ್ ಎಂಬಾತನ ಪತ್ನಿ ಜೊತೆಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಕ್ರಿಮಿನಲ್‌ ಪ್ರಕರಣದಲ್ಲಿ ಅನೀಸ್ ಜೈಲಿನಲ್ಲಿದ್ದು, ಈ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಸೈಯದ್‌. ಇದೇ ಕಾರಣದಿಂದ ಕೊಲೆಯಾಗಿದ್ದು, ಕೊಲೆ ಮಾಡಿ ಆರೋಪಿಗಳು ಎಸ್ಕೇಪ್ ಅಗಿದ್ದಾರೆ. ಕ್ರಿಮಿನಲ್‌ ಪ್ರಕರಣದಲ್ಲಿ ಭಾಗಿಯಾಗಿದ್ದ ಅನೀಸ್‌ನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಅರೆಸ್ಟ್‌ ಮಾಡಿದ್ದರು. ಕೊಲೆಗೆ ಇದೇ ಜಾಗವನ್ನು ಅನೀಸ್‌ ಫಿಕ್ಸ್‌ ಮಾಡಿದ್ದು, ಅಲ್ಲಿಯೇ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ