Breaking News

ಅಪ್ರಾಪ್ತ ಮಗಳು ಸೇರಿದಂತೆ ಪ್ರೇಮಿಗಳನ್ನು ಕಲ್ಲಿನಿಂದ ಜಜ್ಜಿ ಕೊಂದ ತಂದೆ!

Spread the love

ಅನ್ಯ ಕೋಮಿನ ಯುವಕನ ಜೊತೆಗಿದ್ದ ಮಗಳನ್ನು ನೋಡಿದ ತಂದೆ ಇಬ್ಬರು ಪ್ರೇಮಿಗಳನ್ನು ಬರ್ಬರವಾಗಿ ಕೊಂದ ಭೀಕರ ಘಟನೆ ಬಸವನಾಡು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ನಡೆದಿದೆ.

ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಾದ ಬಸವರಾಜ ಬಡಿಗೇರಿ (19) ಹಾಗೂ ಖಾನಾಪುರ ಗ್ರಾಮದ 16 ವರ್ಷದ ಅಪ್ರಾಪ್ತ ಬಾಲಕಿ ದವಲಬಿ ತಂಬದ ಕೊಲೆಯಾದ ದುರ್ದೈವಿಗಳು.

ಅನ್ಯ ಕೋಮಿನವನನ್ನು ಪ್ರೀತಿಗೆ ಅಪ್ರಾಪ್ತೆ ಮನೆಯಲ್ಲಿ ವಿರೋಧವಿತ್ತು. ಇಂದು ಮದ್ಯಾಹ್ನ ಇಬ್ಬರೂ ಒಟ್ಟಿಗೆ ಇದ್ದ ಸಮಯದಲ್ಲಿ ಇಬ್ಬರೂ ಪ್ರೇಮಿಗಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಅಪ್ರಾಪ್ತೆಯ ತಂದೆ ಕೊಲೆ ಮಾಡಿದ್ದಾರೆ.

ಸಲಾದಹಳ್ಳಿ ಹಾಗೂ ಖಾನಾಪುರ ಅಕ್ಕಪಕ್ಕದ ಗ್ರಾಮಗಳಾಗಿದ್ದರಿಂದ ಇಬ್ಬರಿಗೂ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿತ್ತು. ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಂದೆಯನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ