Breaking News

ಸಿಡಿ ಬಹಿರಂಗ ಕೇಸ್; ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದೇನು?

Spread the love

ಧಾರವಾಡ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಸಂತ್ರಸ್ತ ಯುವತಿಯೊಂದಿಗೆ ಮಾತನಾಡಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೀಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯೊಂದಿಗೆ ಮಾತನಾಡಿದ್ದೇನೆ. ಏನಾದರೂ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಹೇಳಿದ್ದೇನೆ. ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದರು.

ಸದ್ಯ ಸಿಡಿ ಬಹಿರಂಗ ಕೇಸ್ ಕೋರ್ಟ್ ನಲ್ಲಿದೆ. ವಿಚಾರಣೆ ಹಂತದಲ್ಲಿರುವುದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಏನೂ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ