Breaking News

ಸಿದ್ದಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!

Spread the love

ಬೆಂಗಳೂರು : ಸಿಎಂ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ಕಿತ್ತಾಟವಾಡಿ ಜನರ ನಡುವೆ ನಗೆಪಾಟಲಿಗೀಡಾಗುವ ನಾಯಕರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದು, ಹಾಗೆ ವಿರೋಧ ಪಕ್ಷದ ನಾಯಕ ಸಿದ್ದಾಮಯ್ಯಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಭೇಟಿ ಮಾಡಿ ಚರ್ಚೆ ನಡೆಸಿ ಬಂದ ನಂತ್ರ ಹೈಕಮಾಂಡ್ ಸಿದ್ದರಾಮಯ್ಯ(Siddaramaiah) ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದು, ಮುಂದಿನ ಸಿಎಂ ಕುರಿತು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯ ಎಂಬ ಸಂದೇಶ ರವಾನೆ ಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ : BPL Cards Holders : ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 1.99 ಲಕ್ಷ ಅನರ್ಹ ‘BPL ಕಾರ್ಡ್ ಗಳು ಪತ್ತೆ!

ಜಮೀರ್ ಅಹಮದ್ ಖಾನ್ ಮುಂದಿನ ಮುಖ್ಯಮಂತ್ರಿ(Next CM Candidate) ಕುರಿತು ಪದೇ ಪದೇ ಹೇಳಿಕೆ ನೀಡಿ ಗೊಂದಲಕ್ಕೆ ಕಾರಣರಾಗುತ್ತಿದ್ದಾರೆ. ಅವರು ಹಚ್ಚಿದ ಬೆಂಕಿಗೆ ಪಕ್ಷದ ಹಲವಾರು ನಾಯಕರು ತುಪ್ಪು ಸುರಿದಿದ್ದಾರೆ.ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕರಾದ ಭೀಮಾನಾಯ್ಕ, ಕಂಪ್ಲಿ ಗಣೇಶ್ ಸೇರಿದಂತೆ ಅನೇಕರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ. ಇಲ್ಲಿ ಗಮನಾರ್ಹ ಅಂಶವೆಂದರೆ ಮುಂದಿನ ಮುಖ್ಯಮಂತ್ರಿ ಕುರಿತು ಹೇಳಿಕೆ ನೀಡುತ್ತಿರುವವರೆಲ್ಲಾ ವಲಸಿಗ ನಾಯಕರು.


Spread the love

About Laxminews 24x7

Check Also

ಆರೋಪಿಗಳನ್ನು ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಸಾವು

Spread the loveಬೆಂಗಳೂರು: ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಿ ಕರೆತರುವಾಗ‌ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲಘಟ್ಟಪುರ ಠಾಣೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ