Breaking News
Home / Uncategorized / ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ! : ಲಕ್ಷ್ಮಣ ಸವದಿ

ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ! : ಲಕ್ಷ್ಮಣ ಸವದಿ

Spread the love

ಬೆಂಗಳೂರು: ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ಮಾಹೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಜಗದೀಶ್ ಶೆಟ್ಟರ್‌ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಬಾಲಚಂದ್ರ ಜಾರಕಿಹೊಳಿ

Spread the loveಬೆಳಗಾವಿ, : ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಇನ್ನುಳಿದ ಕ್ಷೇತ್ರಗಳಿಗೆ ಮೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ