Breaking News

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಗಾಯಗೊಂಡ ಮಹಿಳಾ ಕಾನ್​ಸ್ಟೇಬಲ್​ಗೆ ತುರ್ತು ಸೇವೆ

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಪಘಾತವೊಂದರಲ್ಲಿ ಗಾಯಗೊಂಡ ಮಹಿಳಾ ಪೊಲೀಸ್ ಕಾನ್​ಸ್ಟೇಬಲ್​ಗೆ ತುರ್ತು ಸೇವೆ ಒದಗಿಸಿದ್ದಾರೆ. ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ‌.

ಇಂದು ಮಧ್ಯಾಹ್ನ 12.20ರ ಸುಮಾರಿಗೆ ಮುಲ್ಕಿ‌ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ರೇಣುಕಾ ಅವರು ಪೊಲೀಸ್ ಠಾಣೆಯಿಂದ ತಮ್ಮ ದ್ವಿಚಕ್ರ ವಾಹನದಲ್ಲಿ ಊಟಕ್ಕೆ ಮನೆಗೆ ತೆರಳಿದ್ದರು. ಮುಲ್ಕಿಯ ವಿಜಯ್​ ಸನ್ನಿಧಿ ಜಂಕ್ಷನ್ ಬಳಿ ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಅವರ ಹಣೆಗೆ ಹಾಗೂ ಕಾಲಿಗೆ ಗಾಯವಾಗಿತ್ತು.ಗಾಯಗೊಂಡ ಕಾನ್​ಸ್ಟೇಬಲ್​ಗೆ ತುರ್ತು ಸೇವೆ ಒದಗಿಸಿದ ಸಚಿವ ಕೋಟಈ ಸಂದರ್ಭ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ತಕ್ಷಣ ಕಾರು ನಿಲ್ಲಿಸಿ ರೇಣುಕಾರನ್ನು ತಮ್ಮ ಕಾರಿನಲ್ಲಿಯೇ ಮುಲ್ಕಿ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಗಾಯಾಳು ರೇಣುಕಾಗೆ ಚಿಕಿತ್ಸೆ ಮುಂದುವರಿದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ