Breaking News
Home / ಜಿಲ್ಲೆ / ಬೆಂಗಳೂರು / ರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಹೈ ಅಲರ್ಟ್..!

ರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಹೈ ಅಲರ್ಟ್..!

Spread the love

ಬೆಂಗಳೂರು:ಅಯೋಧ್ಯೆಯಲ್ಲಿ ನಾಳೆ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.

ರಾಜಧಾನಿ ಬೆಂಗಳೂರು,ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಡಿಕೇರಿ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ಕಲಬುರಗಿ, ಸೇರಿದಂತೆ ರಾಜ್ಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಯಿ ಅವರು, ಇಂದು ರಾಜ್ಯ ಪೆÇಲೀಸ್ ಮಹಾನಿದೇರ್ಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಮುಖ್ಯಸ್ಥರು, ಗುಪ್ತಚರ ಮುಖ್ಯಸ್ಥರು, ವಲಯ ಐಜಿಪಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ, ಪರಿಸ್ಥಿತಿಯ ಪರಾಮರ್ಶೆ ನಡೆಸಿದರು.

ಮೆರವಣಿಗೆ, ಪ್ರತಿಭಟನೆ, ಜೈಕಾರ, ಗುಂಪುಗೂಡುವಿಕೆ, ಪಟಾಕಿ ಸಿಡಿಸುವುದು ಸೇರಿದಂತೆ ಯಾವುದೇ ರೀತಿಯ ಧಾರ್ಮಿಕ ಚಟುವಟಿಕೆಗಳಿಗೂ ಅವಕಾಶ ಕೊಡಬಾರದೆಂದು ಗೃಹ ಸಚಿವರು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ಈಗಾಗಲೇ ದೇಶದ ಪ್ರಮುಖ ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅದೇ ರೀತಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಇಂದು ರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ.

ಅಲ್ಲದೆ ಕೆಲ ಸಂಘಟನೆ, ಹೋರಾಟಗಾರರ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು. ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ. ಅಲ್ಲದೆ ಜನನಿಬಿಡ ಪ್ರದೇಶ, ಮಾಲ್, ದೇವಸ್ಥಾನ, ಮೆಜೆಸ್ಟಿಕ್, ಮಾರ್ಕೆಟ್ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ.

ಹಿಂದೂಪರ ಸಂಘಟನೆ, ಹಿಂದೂಯೇತರ ಸಂಘಟನೆಗಳ ಮೇಲೆ ನಿಗಾ ವಹಿಸಲಾಗಿದೆ. ಸಿಎಆರ್ ಮತ್ತು ಕೆಎಸ್‍ಆರ್ಪಿ ತುಕಡಿಗಳನ್ನು ನಿಯೋಜಿಸುವಂತೆ ಸಲಹೆ ಮಾಡಿದ್ದಾರೆ.

ಕೆಲವು ಸಮಾಜ ಘಾತುಕ ಶಕ್ತಿಗಳು ಪರಿಸ್ಥಿತಿಯ ದುರ್ಲಾಭ ಪಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ, ಸಾಧ್ಯವಾದರೆ ಸಂಶಯಾಸ್ಪದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳುವಂತೆಯೂ ಸೂಚನೆ ಕೊಟ್ಟಿದ್ದಾರೆ.

ಬೆಂಗಳೂರಿನ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಪ್ರದೇಶಗಳಾದ ಶಿವಾಜಿನಗರ, ಚಾಮರಾಜಪೇಟೆ, ಜಯಮಹಲ್, ಟ್ಯಾನರಿ ರಸ್ತೆ, ಶಾಂತಿನಗರ ಸೇರಿದಂತೆ ಮತ್ತಿತರ ಕಡೆ ಹೆಚ್ಚುವರಿ ಪಡೆಗಳನ್ನು ನಿಯೋಜನೆ ಮಾಡುವಂತೆ ಆಯುಕ್ತರಿಗೆ ಸೂಚನೆ ನೀಡಿದರು.

ಈ ಹಿಂದೆ ಅಯೋಧ್ಯೆ ಪ್ರಕರಣ ಸಂಬಂಧ ನಗರದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಸರ್ಕಾರದಿಂದ ಮುಂಜಾಗ್ರತವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಇದೇ ರೀತಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮಡಿಕೇರಿ ಸೇರಿದಂತೆ ಕೆಲವು ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಪ್ರದೇಶಗಳಲ್ಲಿ ಇಂದಿನಿಂದಲೇ ಹೆಚ್ಚಿನ ಭದ್ರತೆಯನ್ನು ನಿಯೋಜಿಸಬೇಕೆಂದು ತಾಕೀತು ಮಾಡಿದರು.

ಈ ಹಿಂದೆ ಗಲಭೆಗಳು ಸಂಭವಿಸಿರುವ ಪ್ರದೇಶಗಳಲ್ಲಿ ಇಂದಿನಿಂದಲೇ ಕೆಎಸ್‍ಆರ್‍ಪಿ, ಅರೆಸೇನಾಪಡೆ ಸೇರಿದಂತೆ ವಿವಿಧ ಶ್ರೇಣಿಯ ಭದ್ರತೆಯನ್ನು ನಿಯೋಜಿಸಬೇಕು.

ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಜಾರಿಯಲ್ಲಿರುವ ಕಾರಣ 4ಕ್ಕಿಂತ ಹೆಚ್ಚು ಜನರನ್ನು ಗುಂಪುಗೂಡದಂತೆ ನೋಡಿಕೊಳ್ಳಬೇಕು. ಸಾಧ್ಯವಾದರೆ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಅವಕಾಶ ನೀಡದಂತೆಯೂ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಹಿಂದೆ ಕೇಂದ್ರದ ಸಿಎಎ ಕಾಯ್ದೆ ವಿರೋಧಿಸಿ ಹೆಚ್ಚು ಗಲಭೆ ನಡೆದ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಡಬೇಕು,ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಚಲನವಲನಗಳ ಮೇಲೆ ನಿಗಾ ಇಡಬೇಕು, ಯಾರೇ ಆಗಲಿ ಕಾನೂನು ಉಲ್ಲಂಘಿಸಿದರೆ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವಂತೆಯೂ ಎಚ್ಚರಿಸಿದ್ದಾರೆ.

ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು , ವಲಯ ಐಜಿಪಿಗಳು, ಆಯಾ ಠಾಣಾ ಸಬ್‍ಇನ್‍ಸ್ಪೆಕ್ಟರ್ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿ ಅರ್ಧಗಂಟೆಗೊಮ್ಮೆ ಮಾಹಿತಿ ಪಡೆಯಬೇಕು. ಸಣ್ಣಪುಟ್ಟ ಗಲಭೆಗೂ ಅವಕಾಶ ನೀಡಲೇಬಾರದು ಎಂದು ತಾಕೀತು ಮಾಡಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ