Breaking News

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮುಂಬೈನಲ್ಲಿ ತೀರ್ಮಾನ: ರಮೇಶ್‌ ಜಾರಕಿಹೊಳಿ

Spread the love

ಮೈಸೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ನಂತ್ರ, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಅದಕ್ಕೂ ಮುಂದುವರೆದು, ರಾಜಕೀಯ ನಿವೃತ್ತಿಯನ್ನೇ ಘೋಷಿಸುವಂತ ನಿರ್ಧಾರ ಮಾಡಿದ್ದಾರೆ ಎಂಬ ಮತ್ತಷ್ಟು ಸ್ಪೋಟಕ ಮಾಹಿತಿ ಕೂಡ ತಿಳಿದು ಬಂದಿದೆ. ಆ ಬಗ್ಗೆ ಸ್ವತಹ ರಮೇಶ್ ಜಾರಕಿಹೊಳಿ ಅವರೇ ಏನ್ ಹೇಳಿದ್ರು ಅಂತ ಮುಂದೆ ಓದಿ..

 

ಇಂದು ಮೈಸೂರಿನ ಸುತ್ತೂರು ಮಠಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು. ಸುತ್ತೂರು ಶ್ರೀಗಳನ್ನು ಭೇಟಿಯ ನಂತ್ರ ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದು ನಿಜ. ಆದ್ರೇ ಕೆಲವು ಆಪ್ತರು ಬೇಡವೆಂದು ಸಲಹೆ ಮಾಡಿದ್ದರಿಂದಾಗಿ, ಈಗ ತಾತ್ಕಾಲಿಕವಾಗಿ ಹಿಂದೆ ಸರಿದಿದ್ದೇನೆ ಎಂದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ನಾನು ಶಾಸಕ ಸ್ಥಾನಕ್ಕೆ ಅಷ್ಟೇ ರಾಜೀನಾಮೆ ನೀಡುವುದಿಲ್ಲ. ಜೊತೆ ಜೊತೆಗೆ ನನ್ನ ರಾಜಕೀಯ ಜೀವನಕ್ಕೂ ನಿವೃತ್ತಿಯನ್ನು ಘೋಷಿಸಲಿದ್ದೇನೆ. ನನ್ನ ರಾಜಕೀಯ ಜೀವನ ಬಿಜೆಪಿ ಪಕ್ಷದಲ್ಲೇ ಅಂತ್ಯವಾಗಲಿದೆ ಎಂದು ತಿಳಿಸಿದರು.

 

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರುವುದು, ಹೋಗೋ ಮಾತೇ ಇಲ್ಲ. ಕಾಂಗ್ರೆಸ್ ನಲ್ಲಿ ಇದ್ದಾಗ ಹಲವು ವರ್ಷಗಳಲ್ಲಿ ಸಿಗದ ಗೌರವ ಬಿಜೆಪಿಯಿಂದ ಸಿಕ್ಕಿದೆ. ಹೀಗಾಗಿ ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೆಸ್ ಸೇರೋದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಸಚಿವ ಸ್ಥಾನಕ್ಕೆ ಸಿಎಂ ಮುಂದೆ ಬೇಡಿಕೆ ಇಟ್ಟಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ ಮೇಲೆ, ಸಚಿವ ಸ್ಥಾನಕ್ಕಾಗಿ ಬೇಡಿ ಇಡೋ ಪ್ರಶ್ನೆ ಎಲ್ಲಿ ಬಂತು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡೋದು ನಿಜ. ನನ್ನೊಂದಿಗೆ ಯಾರು ರಾಜೀನಾಮೆ ನೀಡೋದಿಲ್ಲ. ನನ್ನ ನಿರ್ಧಾರವನ್ನು 8 – 10 ದಿನಗಳ ನಂತ್ರ ಪ್ರಕಟಿಸೋದಾಗಿ ತಿಳಿಸಿದರು.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ