Breaking News

ಮತ್ತೆ ಅಖಾಡಕ್ಕಿಳಿದ ಜೇಮ್ಸ್: ಜುಲೈ ಮೊದಲನೇ ವಾರ ಶೂಟಿಂಗ್

Spread the love

ಲಾಕ್‌ಡೌನ್‌ನಿಂದ ವಿಶ್ರಾಂತಿಯಲ್ಲಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯದಲ್ಲೇ ಶೂಟಿಂಗ್ ಅಖಾಡಕ್ಕೆ ಎಂಟ್ರಿ ಕೊಡ್ತಿದ್ದಾರೆ.

ಜುಲೈ ಮೊದಲನೇ ವಾರದಿಂದ ಪವರ್ ಸ್ಟಾರ್ ಜೇಮ್ಸ್ ಸಿನಿಮಾದ ಚಿತ್ರೀಕರಣ ಆರಂಭಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ‘ಭರ್ಜರಿ’ ಚೇತನ್ ಕುಮಾರ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.

 

ಈಗಾಗಲೇ ಜೇಮ್ಸ್ ಸಿನಿಮಾದ ಬಹುಪಾಲು ಶೂಟಿಂಗ್ ಮುಗಿದಿದೆ. ಹೊಸಪೇಟೆ, ಬಳ್ಳಾರಿ ಸುತ್ತಮುತ್ತ ಚಿತ್ರೀಕರಣ ಮಾಡಿದ್ದರು. ಇದೀಗ, ಸಿನಿಮಾದ ಪ್ರಮುಖ ಆಕ್ಷನ್ ದೃಶ್ಯಗಳನ್ನು ಶೂಟ್ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

 

 ಇದಕ್ಕೂ ಮುಂಚೆ ಕಾಶ್ಮೀರಕ್ಕೆ ಹೋಗಿದ್ದ ಜೇಮ್ಸ್ ತಂಡ ಕೆಲವು ಪ್ರಮುಖ ದೃಶ್ಯ ಮತ್ತು ಹಾಡಿನ ಚಿತ್ರೀಕರಣ ಮಾಡಿದ್ದರು. ಕಾಶ್ಮೀರದಲ್ಲಿ ಜೇಮ್ಸ್ ಶೂಟಿಂಗ್ ಮಾಡಿದ್ದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

ಜೇಮ್ಸ್ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್‌ಗೆ ಪ್ರಿಯಾ ಆನಂದ್ ನಾಯಕಿಯಾಗಿದ್ದಾರೆ. ಅನು ಪ್ರಭಾಕರ್ ಹಾಗೂ ತೆಲುಗು ನಟ ಶ್ರೀಕಾಂತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು ಸಹ ಅಭಿನಯಿಸುತ್ತಿದ್ದಾರೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ