Breaking News

ಸುಪ್ರೀಂ ಚಾಟಿ ಬಳಿಕ SSLC,PUC ಪರೀಕ್ಷೆ ಬ್ಯಾನ್ ಮಾಡಿದ ಸರ್ಕಾರ

Spread the love

ಅಮರಾವತಿ: ಹೆಮ್ಮಾರಿ ಸೋಂಕಿನ ಮಧ್ಯೆಯೂ ಎಸ್ ಎಸ್ ಎಲ್ ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆ ರದ್ದು ಮಾಡದ ಆಂಧ್ರ ಪ್ರದೇಶದ ಸರ್ಕಾರದ ವಿರುದ್ಧ ಸುಪ್ರೀಂ ಚಾಟಿ ಬೀಸಿದ ಬೆನ್ನಲ್ಲೇ ಸರ್ಕಾರ ಪರೀಕ್ಷೆ ಬ್ಯಾನ್ ಮಾಡಿದೆ.ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಚಾರವಾಗಿ ನಿನ್ನೆ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಕೋವಿಡ್ ನಿಂದಾಗಿ ಯಾವುದೇ ಮಾರಣಾಂತಿಕ ಘಟನೆಗಳು ಸಂಭವಿಸಿದಲ್ಲಿ ರಾಜ್ಯ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಮೃತರ ಕುಟುಂಬಗಳಿಗೆ ಕಡ್ಡಾಯವಾಗಿ 1 ಕೋಟಿ ರೂ. ಪರಿಹಾರವನ್ನು ನೀಡಲೇಬೇಕು ಎಂದು ಆಂಧ್ರ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು.

ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಇದೀಗ ಆಂಧ್ರ ಪ್ರದೇಶ ಸರ್ಕಾರ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳನ್ನು ರದ್ದು ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆಂಧ್ರ ಪ್ರದೇಶ ಶಿಕ್ಷಣ ಸಚಿವ ಎ ಸುರೇಶ್ ಅವರು, ಸುಪ್ರೀಂಕೋರ್ಟ್ ಆದೇಶ ಮತ್ತು ನಿರ್ಬಂಧಗಳಿಗೆ ಅನುಸಾರವಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪರೀಕ್ಷೆಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ