Breaking News
Home / ಜಿಲ್ಲೆ / ಬೆಂಗಳೂರು / ಪ್ರಧಾನಮಂತ್ರಿ ಆವಾಸ್‌ ಯೋಜನೆ : 80 ಸಾವಿರ ಬಹುಮಹಡಿ ಮನೆಗಳಿಗೆ ಸೀಮಿತ : ವಿ.ಸೋಮಣ್ಣ

ಪ್ರಧಾನಮಂತ್ರಿ ಆವಾಸ್‌ ಯೋಜನೆ : 80 ಸಾವಿರ ಬಹುಮಹಡಿ ಮನೆಗಳಿಗೆ ಸೀಮಿತ : ವಿ.ಸೋಮಣ್ಣ

Spread the love

\: ಪ್ರಧಾನಮಂತ್ರಿ ಅವಾಸ್‌ ಯೋಜನೆಯಡಿ ಬಡ ಜನರಿಗೆ ವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆ 80 ಸಾವಿರಕ್ಕೆ ಸೀಮಿತಗೊಳ್ಳಲಿದೆ.

ಜಮೀನು ಕೊರತೆ ಹಿನ್ನೆಲೆಯಲ್ಲಿ ಒಂದು ಲಕ್ಷ ಮನೆಗಳ ಬದಲಿಗೆ 80 ಸಾವಿರ ಮನೆ ಮಾತ್ರ ನಿರ್ಮಾಣವಾಗಲಿದೆ. ಆಗಸ್ಟ್‌ 15 ರೊಳಗೆ 5 ಸಾವಿರ ಮನೆಗಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ವಿಕಾಸಸೌಧಲ್ಲಿ ಶುಕ್ರವಾರ ರಾಜೀವ್‌ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ 515 ಎಕರೆ ಭೂಮಿ ಪಡೆಯಲಾಗಿದೆ.

ಮೊದಲ ಹಂತದಲ್ಲಿ 46,998 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು, 42361 ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ, 2022ರ ನವೆಂಬರ್‌ ವೇಳೆಗೆ 80,000 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ವಿತರಿಸಲಾಗುವುದು ಎಂದು ಹೇಳಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೀಮಿತವಾಗಿದ್ದ ಸೌಲಭ್ಯವನ್ನು ಬೆಂಗಳೂರು ನಗರ ಜಿಲ್ಲೆಗೆ ವಿಸ್ತರಿಸಲಾಗಿದ್ದು, ವಾರ್ಷಿಕ ಆದಾಯದ ಮಿತಿಯನ್ನು 87,600 ರೂ.ಗಳಿಂದ 3 ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ್‌ ಮತ್ತಿತರರು ಪಾಲ್ಗೊಂಡಿದ್ದರು.

ಹೊಸದಾಗಿ ಅರ್ಜಿ ಹಾಕಬೇಕು
ಯೋಜನೆಯಡಿ ಈಗಾಗಲ 65 ಸಾವಿರ ಅರ್ಜಿ ಸಲ್ಲಿಸಲಾಗಿತ್ತಾದರೂ ಆದಾಯ ಮಿತಿ 87,600 ರೂ.ನಿಂದ ಮೂರು ಲಕ್ಷ ರೂ.ಗೆ ಏರಿಕೆ ಮಾಡಿರುವುದು ಹಾಗೂ ಬಿಬಿಎಂಪಿ ವ್ಯಾಪ್ತಿಯೂ ಸೇರಿ ಬೆಂಗಳೂರು ನಗರ ಜಿಲ್ಲೆಗೆ ಯೋಜನೆ ವ್ಯಾಪ್ತಿ ವಿಸ್ತರಿಸಿರುವುದರಿಂದ ಜುಲೈ 30 ರಿಂದ (ಬುಧವಾರ) ಹೊಸದಾಗಿ ಅರ್ಜಿ ಸ್ವೀಕಾರ ಮಾಡಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿದವರೂ ಹಾಕಬಹುದು.
– ವಿ.ಸೋಮಣ್ಣ


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ