Breaking News

ಮನೆಗೆ ಬಂದ ಸೊಸೆಯ ಹಾಗೆ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ ,ಯಡಿಯೂರಪ್ಪ ಬಿಜೆಪಿ ಬಿಟ್ಟರೆ ಬರೋದು 40 ಸೀಟು ಮಾತ್ರ : ಸಿಎಂ.ಇಬ್ರಾಹಿಂ

Spread the love

ಬೆಂಗಳೂರು: ಮನೆಗೆ ಬರುವಾಗ ಸೊಸೆ ಹೊಸದಾಗಿಯೇ ಬರುವುದು. ಸೊಸೆಗೆ ನೀನು ವಲಸೆ ಬಂದವಳೆಂದು ಹೇಳಲು ಆಗುತ್ತದೆಯೇ? ಸ್ವಲ್ಪ ದಿನವಾದರೆ ಅವಳ ಕೈಗೆ ಕೀಲಿ ಕೈ ಹೋಗುತ್ತದೆ. ಹಾಗೆಯೇ ಈಗ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ. ಹಾಗಾಗಿ ವಲಸಿಗ, ಹೊಸಬ ಎನ್ನುವ ಭೇದಭಾವ ಇಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು.

ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಅವರು,ಸಿದ್ದರಾಮಯ್ಯನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಮುಂದೆ ತಂದವರು ಯಾರು? ಇಂತವನೊಬ್ಬ ಇದ್ದಾನೆ ಅಂತ ಹೇಳಿದ್ದೇ ನಾವು. ಸಿದ್ದರಾಮಯ್ಯ ಅವರಿಗೆ ಮೇಕಪ್ ಮಾಡಿದವರೇ ನಾವು ಎಂದು ಹೇಳಿದರು.

ಅವರು ಹೀರೋ ಇದ್ದರೂ ಹಿನ್ನೆಲೆ ಗಾಯಕರು ಯಾರು? ಸ್ವಲ್ಪ ಕ್ಯಾಸೆಟ್ ತೆಗೆದು ನೋಡಿ. ಹಿನ್ನೆಲೆ ಗಾಯಕ ಯಾವತ್ತೂ ಕಾಣಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು.

 

ಒಂದು ರೂ. ಅಕ್ಕಿ, ಮಧ್ಯಾಹ್ನದ ಊಟ ತಂದವರು ಯಾರು? ತಮಿಳುನಾಡಿನಲ್ಲಿ ಎರಡು ದಿನ ಕುಳಿತು ನಾನು ಅಧ್ಯಯನ ಮಾಡಿ ಆ ಯೋಜನೆ ಕೊಟ್ಟಿದ್ದೆ. ಯೋಜನಾ ಆಯೋಗದ ಉಪಾಧ್ಯಕ್ಷನಾಗಿ ಯೋಜನೆ ಕೊಟ್ಟೆ. ಆ ಯೋಜನೆ ಯಶಸ್ವಿಯಾಯಿತು ಎಂದು ಸಿದ್ದರಾಮಯ್ಯ ಸಾಧನೆಯ ಹಿಂದೆ ತನ್ನ ಕೆಲಸದ ಬಗ್ಗೆ ಹೇಳಿದರು.

ಮೊದಲು ವಿಧಾನಸಭೆ ಚುನಾವಣೆ ಗೆಲ್ಲಿ. ನಂತರ ಶಾಸಕರ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಬಗ್ಗೆ ತೀರ್ಮಾನ ಮಾಡೋಣ. ರಾಷ್ಟ್ರೀಯ ಪಕ್ಷದಲ್ಲಿ ಒಂದು ಪದ್ಧತಿ ಇರುತ್ತದೆ. ಶೇ 90ರಷ್ಟು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಸಿದ್ದರಾಮಯ್ಯಗೆ ಒಳ್ಳೆಯ ಟೀಂ ಸಿಕ್ತು. ಯಡಿಯೂರಪ್ಪಗೆಂದು ಟೀಂ ಸಿಗಲಿಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಇಬ್ಬರೇ ತಂಡ. ಯಡಿಯೂರಪ್ಪಗೆ ಜಾತಿ ಬೆಂಬಲ ಇದೆ. ಯಡಿಯೂರಪ್ಪ ಬಿಜೆಪಿ ಬಿಟ್ಟರೆ ಬರೋದು 40 ಸೀಟು ಮಾತ್ರ ಎಂದು ಇಬ್ರಾಹಿಂ ಹೇಳಿದರು.


Spread the love

About Laxminews 24x7

Check Also

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Spread the loveಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ  ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ