Breaking News

ದಕ್ಷಿಣ ಕನ್ನಡ: ಪದವಿ ವಿದ್ಯಾರ್ಥಿಗಳಿಗೆ, ಭೋಧಕರಿಗೆ ಕೋವಿಡ್‌ ಲಸಿಕೆ ನಾಳೆಯಿಂದ

Spread the love

ಮಂಗಳೂರು: ಮುಂದಿನ ತಿಂಗಳಿಂದ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ.

ಸೋಮವಾರದಿಂದ ಜಿಲ್ಲೆಯ ಎಲ್ಲ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್‌, ಪ್ಯಾರಾಮೆಡಿಕಲ್‌ ಕಾಲೇಜುಗಳ 18 ವರ್ಷ ಮೇಲಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಭ್ಯತೆಗೆ ಅನುಗುಣವಾಗಿ ಲಸಿಕಾ ಶಿಬಿರ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ಹೇಳಿದ್ದಾರೆ.

ಜೂನ್‌ 28 ರಿಂದ ಜಿಲ್ಲೆಯ ಎಲ್ಲ ನಗರ, ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳು, ಎಲ್ಲ ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಯಲ್ಲಿಯೂ ಶಿಬಿರ ಮುಂದುವರಿಯಲಿದೆ.

ಲಸಿಕೆ ಶಿಬಿರ ನಡೆಸುವ ಶಿಕ್ಷಣ ಸಂಸ್ಥೆಗಳ ನೋಡಲ್‌ ಅಧಿಕಾರಿಗಳು, ಶಿಬಿರದ ಸ್ಥಳ ಹಾಗೂ ದಿನಾಂಕವನ್ನು ನಿಗದಿ ಪಡಿಸಿ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯ ಮಾಹಿತಿಯನ್ನು ಇಲಾಖೆಗೆ ನೀಡಬೇಕು. ಲಸಿಕೆ ಶಿಬಿರಕ್ಕೆ ಬರುವ ವಿದ್ಯಾರ್ಥಿಗಳು ಕಾಲೇಜಿನ ಗುರುತಿನ ಚೀಟಿ ಹಾಗೂ ಆಧಾರ್‌ ಕಾರ್ಡ್‌ಗಳನ್ನು ತರಬೇಕು ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ