ರಾಯಚೂರು: ರಾಯಚೂರು ಜಿಲ್ಲೆಯ ಹಲವೆಡೆ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಸ್ಕಿ ಪಟ್ಟಣದ ಗಾಂಧಿನಗರ ಬಡಾವಣೆಯಲ್ಲಿ ಭಾರಿ ಮಳೆಯ ಕಾರಣ ಭಾರಿ ಪ್ರಮಾಣದ ನೀರು ರಸ್ತೆ ಮೇಲೆ ಹರಿದು ಮನೆಗಳಿಗೆ ನುಗ್ಗಿದ್ದು ನಿವಾಸಿಗಳಿಗೆ ತೊಂದರೆಯಾಗಿದೆ. ಮಸ್ಕಿಯ ಅನೇಕ ರಸ್ತೆ, ಬಡಾವಣೆಗಳು ನದಿಗಳಾಂಗಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ, ಅವಾಂತರ ಸೃಷ್ಟಿಸಿದ್ದು, ಮನೆಯಿಂದ ನೀರು ಹೊರಹಾಕಲು ಜನ ಹರಸಾಹಸ ನಡೆಸಿದ್ದಾರೆ.
ಮಸ್ಕಿ ಪಟ್ಟಣ ಅನೇಕ ಭಾಗದಲ್ಲಿ ಜಲಾವೃತಗೊಂಡು ರಾತ್ರಿ ಇಡೀ ಜನ ತೊಂದರೆ ಅನುಭವಿಸುವಂತಾಗಿದೆ. ವಾಹನಗಳು ನೀರಿನಲ್ಲಿ ಮುಳುಗಡೆಯಾಗಿವೆ. ಗಾಂಧಿನಗರ ಬಡಾವಣೆ ಸೇರಿದಂತೆ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನ ತೊಂದರೆ ಅನುಭವಿಸಿದ್ದಾರೆ.
 Laxmi News 24×7
Laxmi News 24×7
				 
		 
						
					 
						
					 
						
					