Breaking News

ಉತ್ತರ ಕನ್ನಡದ ಮಹಿಳೆಯಿಂದ ಅಂಗಾಂಗ ದಾನ; ಧಾರವಾಡದಿಂದ ಬೆಂಗಳೂರಿಗೆ ಮಹಿಳೆಯ ಲಿವರ್ ಏರ್​ಲಿಫ್ಟ್

Spread the love

ಧಾರವಾಡ: ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಲಿವರ್​ನ್ನು ಏರ್‌ಲಿಫ್ಟ್ ಧಾರವಾಡದ ಎಸ್​ಡಿಎಂ ಆಸ್ಪತ್ರೆಯಿಂದ ಬೆಂಗಳೂರಿಗೆ ಮೂಲಕ ರವಾನಿಸಲಾಗಿದೆ. ಲೀವರ್​ನ್ನು ಹುಬ್ಬಳಿಯ ವಿಮಾನ ನಿಲ್ದಾಣಕ್ಕೆ ರವಾನಿಸಲು ಗ್ರೀನ್ ಕಾರಿಡಾರ್ ಮೂಲಕ ಅಂಬ್ಯುಲೆನ್ಸ್‌ಗೆ ಪೊಲೀಸರು ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಅಂಗಾಗ ದಾನ ಮಾಡಿದ ಮಹಿಳೆಯ ಜತೆ ಪೊಲೀಸ್ ಇಲಾಖೆಯೂ ಮಾನವೀಯ ಕಾರ್ಯದಲ್ಲಿ ಕೈಜೋಡಿಸಿದೆ.

ಎರಡು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಗ ದಾನ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಮಹಿಳೆಯೋರ್ವರ ಅಂಗಾಗ ದಾನಕ್ಕೆ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಎರಡು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟಾಗಿದ್ದರಿಂದ ಮಹಿಳೆಯ ಮೆದುಳು ನಿಷ್ಕೃಯಗೊಂಡಿತ್ತು. ಮಹಿಳೆಯನ್ನು ಧಾರವಾಡ ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳೆಯ ಎರಡು ಕಣ್ಣು, ಎರಡು ಕಿಡ್ನಿಗಳನ್ನು ಆಸ್ಪತ್ರೆಯಲ್ಲೇ ಬಳಕೆ ಮಾಡಲಾಗಿದೆ. ಮಹಿಳೆಯ ಲಿವರ್ ಮಾತ್ರ ಏರ್​ಲಿಫ್ಟ್ ಮೂಲಕ ಬೆಂಗಳೂರಿಗೆ ಏರ್​ಲಿಫ್ಟ್ ಮೂಲಕ ರವಾನಿಸಲಾಗಿದೆ.

ಮೆದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಗ ದಾನಕ್ಕೆ ನಿರ್ಧರಿಸಿದ ಉತ್ತರ ಕನ್ನಡ ಮೂಲದ ಶಿರಸಿ ಮಹಿಳೆ ಹಲವರ ಬಾಳಿಗೆ ಹೊಸ ಅರ್ಥ ಕಲ್ಪಿಸಿಕೊಟ್ಟಿದ್ದಾರೆ. ಮಹಿಳೆಯ ಮನೆಯವರು ಕೈಗೊಂಡ ದೃಢ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಇತ್ತೀಚಿಗಷ್ಟೇ ಅಂಗಾಗ ದಾನ ಮಾಡಿದ್ದ ನಟ ಸಂಚಾರಿ ವಿಜಯ್
ಇತ್ತೀಚಿಗಷ್ಟೇ ಆಕಸ್ಮಿಕ ಅಪಘಾತದಲ್ಲಿ ಅಕಾಲಿಕವಾಗಿ ಪ್ರಾಣತೆತ್ತ ಯುವ ಪ್ರತಿಭಾವಂತ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಅವರ ಕುಟುಂಬದವರು ಸಂಚಾರಿ ವಿಜಯ್ ಅವರ ಅಂಗಾಂಗಳನ್ನ ದಾನ ಮಾಡಲು ಒಪ್ಪಿಗೆ ಸೂಚಿಸಿದ್ದರು. ಸಂಚಾರಿ ವಿಜಯ್​ ಅವರ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ಯಶಸ್ವಿಯಾಗಿತ್ತು ಮಹಿಳೆಯೊಬ್ಬರಿಗೆ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ಮಾಡಲಾಗಿದೆ. 34 ವರ್ಷದ ಮಹಿಳೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ನಡೆದಿದೆ. ಇನ್ನು ನಟ ಸಂಚಾರಿ ವಿಜಯ್ ಅವರ ಕಣ್ಣುಗಳು​ ಮಿಂಟೋ ಆಸ್ಪತ್ರೆಯಲ್ಲಿ ಇಬ್ಬರಿಗೆ ಜೋಡಣೆಯಾಗಿದೆ.


Spread the love

About Laxminews 24x7

Check Also

ಧಾರವಾಡದ ಹಿರಿಯ ಪತ್ರಿಕಾ ಫೋಟೋಗ್ರಾಫರ್ ಆರ್ ಕೆ ( ರಾಮಚಂದ್ರ ಕುಲಕರ್ಣಿ) ಇನ್ನಿಲ್ಲ

Spread the loveಧಾರವಾಡ: ಆರ್ ಕೆ ಖ್ಯಾತಿಯ ಹಿರಿಯ ಪತ್ರಿಕಾ ಪೋಟೋಗ್ರಾಫರಾಗಿ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ರಾಮಚಂದ್ರ ಕುಲಕರ್ಣಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ