Breaking News
Home / ಜಿಲ್ಲೆ / ಬೆಳಗಾವಿ / ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು:ಕನ್ನಡಪರ ಸಂಘಟನೆಗಳು

ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು:ಕನ್ನಡಪರ ಸಂಘಟನೆಗಳು

Spread the love

ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ 23 ಕಚೇರಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ ಕೂಡಲೇ ಈ ನಿರ್ಣಯ ವಾಪಸ್ ಪಡೆಯಬೇಕು,ಬಾಡಿಗೆ ಉಳಿಸಲು ಕಚೇರಿಗಳನ್ನು ಸ್ಥಳಾಂತರ ಮಾಡಲು ಅದೇನು ಮಿನಿ ವಿಧಾನಸೌಧವೂ ಅಲ್ಲ,ಜಿಲ್ಲಾಡಳಿತದ ಭವನವೂ ಅಲ್ಲ ಬೆಳಗಾವಿಯ ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕು,ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

ಬೆಳಗಾವಿ ಜಿಲ್ಲಾಡಳಿತ ಜಿಲ್ಲಾ ಮಂತ್ರಿಗಳನ್ನು,ಜಿಲ್ಲೆಯಲ್ಲಿರುವ ಉಪ ಮುಖ್ಯಮಂತ್ರಿಗಳು ಹಾಗೂ ಇತರ ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಕಚೇರಿಗಳನ್ನು ಸ್ಥಳಾಂತರ ಮಾಡುವ ವಿಷಯವನ್ನು ಅವರ ಗಮನಕ್ಕೂ ತರದೇ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ,ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕನ್ನಡ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿವೆ


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ