Breaking News
Home / ರಾಜಕೀಯ / ಒಬ್ಬನಿಗೆ ಅಪ್ಪ-ಅಮ್ಮನ ಬಗ್ಗೆ ಪ್ರೀತಿ, ಇನ್ನೊಬ್ಬನಿಗೆ ದ್ವೇಷ; ಇಬ್ಬರೂ ಸೇರಿ ಮಾಡಿದ್ರು ಬ್ಯಾಂಕ್ ಲೂಟಿ!

ಒಬ್ಬನಿಗೆ ಅಪ್ಪ-ಅಮ್ಮನ ಬಗ್ಗೆ ಪ್ರೀತಿ, ಇನ್ನೊಬ್ಬನಿಗೆ ದ್ವೇಷ; ಇಬ್ಬರೂ ಸೇರಿ ಮಾಡಿದ್ರು ಬ್ಯಾಂಕ್ ಲೂಟಿ!

Spread the love

ನವದೆಹಲಿ: ಅಪ್ಪ-ಅಮ್ಮನನ್ನು ಮೆಚ್ಚಿಸುವ ಸಲುವಾಗಿ ಯುವಕನೊಬ್ಬ ಬ್ಯಾಂಕ್ ಲೂಟಿ ಮಾಡಿದ್ದು, ಆತನಿಗೆ ಅಪ್ಪ-ಅಮ್ಮನ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ಎಂಬ ಉದ್ದೇಶವಿದ್ದ ಇನ್ನೊಬ್ಬ ಕೈಜೋಡಿಸಿದ್ದಾನೆ. ಕೊನೆಗೆ ಇವರಿಬ್ಬರೂ ತಾವಂದುಕೊಂಡಿದ್ದನ್ನು ಮಾಡುವುದರಲ್ಲಿ ಯಶಸ್ವಿಯಾಗಿದ್ದರೂ, ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.

ಹದಿನೆಂಟು ವರ್ಷದ ಅಜಯ್ ಬಜಾರೆ ಹಾಗೂ ಪ್ರದೀಪ್ ಠಾಕೂರ್ ಎಂಬಿಬ್ಬರು ಜೊತೆಯಾಗಿ ಈ ಲೂಟಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾರಾಷ್ಟ್ರದ ಇಂದಿರಾಗಾಂಧಿ ನಗರದ ಬರಾನಲ್ ಸ್ಕ್ವೇರ್​ನಲ್ಲಿರುವ ಕೋ-ಆಪರೇಟಿವ್ ಬ್ಯಾಂಕೊಂದರಲ್ಲಿ ಇವರಿಬ್ಬರೂ ಸೇರಿ 4.78 ಲಕ್ಷ ರೂಪಾಯಿ ಲೂಟಿ ಮಾಡಿದ್ದಾರೆ.

 

ತನಗೆ ಭಾರಿ ಸಂಪಾದನೆ ಇದೆ ಎಂದು ಅಪ್ಪ-ಅಮ್ಮನನ್ನು ಮೆಚ್ಚಿಸುವ ಸಲುವಾಗಿ ಅಜಯ್​, ಪ್ರದೀಪ್ ಜತೆ ಸೇರಿ ಈ ಕೃತ್ಯ ಎಸಗಿದ್ದಾನೆ. ಮಾತ್ರವಲ್ಲ ಲೂಟಿಯ ಹಣದಲ್ಲಿ ಅಮ್ಮನಿಗೆ 50 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕೊಡಿಸಿದ್ದರೆ, ಅಪ್ಪನಿಗೆ 40 ಸಾವಿರ ರೂ. ಕೊಟ್ಟು ಒಂದು ಸೆಕೆಂಡ್ ಹ್ಯಾಂಡ್ ಕಾರ್ ಕೊಡಿಸಿದ್ದಾನೆ.

 

ಇನ್ನು ಇವನಿಗೆ ಸಹಕರಿಸಿರುವ ಪ್ರದೀಪ್ ಕಥೆಯೇ ಬೇರೆ. ಈತ ಚಿಕ್ಕಂದಿನಲ್ಲೇ ಅಪ್ಪ-ಅಮ್ಮನಿಂದ ಪರಿತ್ಯಕ್ತನಾಗಿದ್ದು, ಅವರ ಮೇಲಿನ ಸೇಡಿಗೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಹಣ ಕದ್ದ ಬಳಿಕ ಇಬ್ಬರೂ ಎರಡು ಹೊಸ ಮೊಬೈಲ್ ಫೋನ್ ಖರೀದಿಸಿ ರಾಜಸ್ಥಾನಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಆದರೆ ತನಿಖೆಗಿಳಿದಿದ್ದ ಪೊಲೀಸರು ಇವರ ಜಾಡು ಹಿಡಿದು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು ಬರೀ 2 ಲಕ್ಷ ರೂ. ಮೌಲ್ಯದ ನಗ-ನಗದನ್ನು ಪೊಲೀಸರು ವಶಪಡಿಸಿಕೊಳ್ಳಲು ಸಾಧ್ಯವಾಗಿದ್ದು, ಉಳಿದುದನ್ನು ಅವರು ಖರ್ಚು ಮಾಡಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ