Breaking News

ಸ್ನೇಹಿತರೊಂದಿಗೆ ಕೂಡಿ ಪ್ರೇಯಸಿ ಮೇಲೆ ಅತ್ಯಾಚಾರ: ಊರ ಹೊರಗೆ ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾದ ಸಂತ್ರಸ್ತೆ

Spread the love

ಉತ್ತರ ಪ್ರದೇಶ: ಗರ್ಲ್ ಪ್ರೇಂಡ್ ಮೇಲೆ ಸ್ನೇಹಿತರೊಂದಿಗೆ ಸೇರಿ ಬಾಯ್ಫ್ರೆಂಡ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್ ನಲ್ಲಿ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಗ್ರಾಮದ ಹೊರಗೆ ಬಂದು ತನ್ನನ್ನು ಭೇಟಿ ಮಾಡುವಂತೆ ಸ್ನೇಹಿತ ಫೋನ್ ಮಾಡಿದ್ದಾನೆ. ಆಕೆ ಬರುತ್ತಿದ್ದಂತೆ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಾನೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದೀಗ ಸಂತ್ರಸ್ತೆ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ವೈದ್ಯಕೀಯ ಪರೀಕ್ಷೆ ಗೊಳಪಡಿಸಲಾಗಿದೆ. ಉತ್ತರ ಪ್ರದೇಶದ ಕೊಲ್ಹುಯಿ ಪೊಲೀಸ್ ಠಾಣಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯುವತಿ ತನ್ನ ಪ್ರೇಮಿ ಭೇಟಿಯಾಗುವ ಉದ್ದೇಶದಿಂದ ಹೊರ ಬರುತ್ತಿದ್ದಂತೆ ಈ ಕೃತ್ಯವೆಸಗಿದ್ದಾರೆ. ಆಕೆ ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಬಿದ್ದಿದ್ದಾಳೆ. ಹುಡುಗಿಯ ಕುಟುಂಬಸ್ಥರು ಶೋಧಕಾರ್ಯ ನಡೆಸುತ್ತಿದ್ದಂತೆ ಆಕೆಯ ಉರ ಹೊರಗೆ ಸಿಕ್ಕಿದ್ದಾಳೆ. ಈ ವೇಳೆ, ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಮಾಹಿತಿ ನೀಡಿದ್ದಾಳೆ.

ಸ್ಥಳ ಪರಿಶೀಲನೆ ನಡೆಸಿರುವ ಪೊಲೀಸ್ ವರಿಷ್ಠಾಧಿಕಾರಿಗಳು ಆರೋಪಿಗಳ ಬಂಧನಕ್ಕಾಗಿ ಎರಡು ತಂಡ ರಚನೆ ಮಾಡಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಪ್ತಾ, ವ್ಯಕ್ತಿ ಹಾಗೂ ಆತನ ಸ್ನೇಹಿತರು ಸೇರಿ ದುಷ್ಕೃತ್ಯವೆಸಗಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈಗಾಗಲೇ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಅವರ ಬಂಧನ ಮಾಡಲಾಗುವುದು ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ