ಹಾವೇರಿ: ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಮತ್ತು ಹಾನಗಲ್ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನಾಲ್ಕು ಮೆಡಿಕಲ್ ಶಾಪ್, ಒಂದು ಕಿರಾಣಿ ಮತ್ತು ತರಕಾರಿ ಅಂಗಡಿ ಸೇರಿದಂತೆ ಎಂಟು ಅಂಗಡಿಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ನಾಲ್ಕು ಅಂಗಡಿಗಳಲ್ಲಿ ಒಂದು ಸಾವಿರ, ಐದು ಸಾವಿರ ಹೀಗೆ ಕೈಗೆ ಸಿಕ್ಕಷ್ಟು ಹಣವನ್ನ ದೋಚಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಇನ್ನು ನಾಲ್ಕು ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ್ದರೂ ಏನೂ ಸಿಗದೇ ತೆರೆಳಿದ್ದಾರೆ. ಅಂಗಡಿಗಳ ಬೀಗ ಮುರಿದು ಬೆಳಗಿನ ಜಾವ ಕೈಚಳಕ ತೋರಿಸಿ ಖದೀಮರು ಪರಾರಿ ಆಗಿದ್ದು, ಒಂದು ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಕಳ್ಳರ ಕೃತ್ಯ ಸೆರೆಯಾಗಿದೆ. ಸ್ಥಳಕ್ಕೆ ಪಿಎಸ್‍ಐ ಶ್ರೀಶೈಲ ಪಟ್ಟಣಶೆಟ್ಟಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Laxmi News 24×7