ವಿಜಯಪುರ: ‘ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅವರ ಕುರ್ಚಿ ಖಾಲಿಯಾದ ಮೇಲೆ ನೋಡೋಣ’ ಎಂದಿದ್ದಾರೆ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದ ಮಹದಿಚ್ಛೆ ಇರುವುದನ್ನು ಅವರು ತೆರೆದಿಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಣೆಕಟ್ಟು ವೀಕ್ಷಣೆಗೆ ಆಗಮಿಸಿದ್ದ ಅವರಿಗೆ ಸುದ್ದಿಗಾರರು ಕೇಳಿದ ‘ನಿಮಗೆ ಮುಖ್ಯಮಂತ್ರಿ ಆಗಬೇಕೆಂಬ ಇಚ್ಛೆ ಇದೆಯಾ?’ ಎಂಬ ಪ್ರಶ್ನೆ ಕೇಳಿದ್ದಾರೆ, ಪ್ರಶ್ನೆಗೆ ಪ್ರಶ್ನೆಯ ಮೂಲಕವೇ ಉತ್ತರಿಸಿದ ಆಹಾರ ಸಚಿವ ಉಮೇಶ್ ಕತ್ತಿ, ನಾನ್ಯಾಕೆ ಸಿಎಂ ಆಗಬಾರದು ಎಂದು ಅವರು ಮರು ಪ್ರಶ್ನಿಸಿದ್ದಾರೆ. ಅಲ್ಲದೇ ತಮ್ಮ ಮರು ಪ್ರಶ್ನೆಗೆ ಕಾರಣಗಳನ್ನೂ ತೆರೆದಿಟ್ಟಿದ್ದಾರೆ.
‘ನಾನು ಈವರೆಗೆ ಒಟ್ಟ 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಾನೆ. ಈ ಅನುಭವವೇ ಸಾಕು, ನಾನು ಮುಖ್ಯಮಂತ್ರಿ ಆಗುವ ಇಚ್ಛೆಯನ್ನು ಹೊಂದಲು. ಆದರೆ ಸದ್ಯ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಈ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಹೀಗಾಗಿ ನಾನು ಇನ್ನೂ 2 ವರ್ಷಗಳ ಕಾಲ ಮುಖ್ಯಮಂತ್ರಿಯಾಗಲು ಸಾಧ್ಯವಾಗದು. ಆದರೆ 2 ವರ್ಷದ ನಂತರ ಆ ಕುರ್ಚಿ ಖಾಲಿಯಾಗಲಿದೆ. ಆಗ ಖಂಡಿತವಾಗಿಯೂ ಮುಖ್ಯಮಂತ್ರಿಯಾಗು ಇಚ್ಛೆ ಇದೆ ಎಂದು ಅವರು ಉತ್ತರಿಸಿದ್ದಾರೆ.
ಮುಂದಿನ ಮುಖ್ಯಮಂತ್ರಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದವರಿಗೆ ನೊಟೀಸ್: ಕೋಳಿವಾಡ
ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಬಹಿರಂಗ ಹೇಳಿಕೆ ನೀಡಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ನಗರದಲ್ಲಿ ಕಾಂಗ್ರೆಸ್ ಶಿಸ್ತು ಸಮಿತಿ ಸದಸ್ಯ ಕೆ.ಬಿ.ಕೋಳಿವಾಡ ಹೇಳಿದರು. ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಹೇಳಿಕೆ ನೀಡಿರುವ ಶಾಸಕರಿಗೆ ನೊಟೀಸ್ ಜಾರಿ ಮಾಡಲಾಗುವುದು. ಶಿಸ್ತು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು, ಶಿಸ್ತು ಸಮಿತಿ ಬಗ್ಗೆ ಯಾರೂ ಲಘುವಾಗಿ ಪರಿಗಣಿಸಬೇಡಿ ಎಂದು ಸಲಹೆ ಮಾಡಿದರು.
ಸಿಎಂ ಅಭ್ಯರ್ಥಿ ಬಗ್ಗೆ ಹೇಳಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಕೆಪಿಸಿಸಿ ಶಿಸ್ತು ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಇನ್ನೊಂದು ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಲು ಸಮಿತಿ ನಿರ್ಧರಿಸಿದೆ. ಶಾಸಕರಿಗೆ ನೋಟಿಸ್ ನೀಡಿ ಸಭೆಗೆ ಕರೆಸಬೇಕು. ಈಗ ಕ್ರಮಕೈಗೊಳ್ಳದಿದ್ದರೆ ಸಮಿತಿ ಬಗ್ಗೆ ಉಳಿದ ಶಾಸಕರೂ ಲಘುವಾಗಿ ಪರಿಗಣಿಸುವ ಅಪಾಯವಿದೆ ಎಂದು ಅವರು ತಿಳಿಸಿದರು.
Laxmi News 24×7