ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜೀನಾಮೆ ಪರಿಹಾರವಲ್ಲ ಎಂದು ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ಮಂತ್ರಿ ಆಗಬೇಕು ಎಂಬ ಆಸೆ ಸಹಜ. ರಾಜೀನಾಮೆ ಕೊಡಬೇಡಿ ಎಂದು ರಮೇಶ್ ಜಾರಕಿಹೊಳಿಯವರಿಗೆ ಹೇಳಿದ್ದೇನೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸುತ್ತೇನೆ ಎಂದರು.
Laxmi News 24×7