ವಿಜಯಪುರ : ಸಾಲ ಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಇಂಡಿ ತಾಲೂಕಿನಿಂದ ವರದಿಯಾಗಿದೆ.
ಇಂಡಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೈತನನ್ನು ಬಶೀರ ಬುರಾನ ಪಟೇಲ (35) ಎಂದು ಗುರುತಿಸಲಾಗಿದೆ.
ಮೃತ ರೈತ ಇಂಗಳಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಲಕ್ಷ ರೂ, ಖಾಸಗಿಯಾಗಿ 2 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ.
ಮೃತ ರೈತನಿಗೆ ಪತ್ನಿ, ಮೂವರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾರೆ. ಈ ಕುರಿತು ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7