Breaking News

ಪರೀಕ್ಷೆ ನಡೆಸಿ ರಾಜ್ಯ ಸರ್ಕಾರ ಜೀವ ,ಜೀವನ ಎರಡನ್ನೂ ತೆಗೆಯಲು ಹೊರಟಿದೆ: ವಿಶ್ವನಾಥ್

Spread the love

ದಾವಣಗೆರೆ: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಖಂಡಿತವಾಗಿಯೂ ಸಚಿವರಾಗುತ್ತಾರೆ ಎಂದು ಬಾಂಬೆ ದೋಸ್ತ್‌ಗಳಲ್ಲಿ ಒಬ್ಬರಾದ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನಂ ಅವರು ಸಚಿವರಾಗುವುದು ಖಂಡಿತ. ಅವರನ್ನು ಮಂತ್ರಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ. ಮುನಿರತ್ನ ನಿರಾಶರಾಗುವ ಅವಶ್ಯಕತೆಯೇ ಇಲ್ಲ. ಸಚಿವ ಸ್ಥಾನ ಖಂಡಿತವಾಗಿಯೂ ಸಿಗುತ್ತದೆ ಎಂದರು.

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದ 17 ಶಾಸಕರು ನೆಮ್ಮದಿಯಿಂದ ಇಲ್ಲ ಎಂಬ ವಿಧಾನ ಪರಿಷತ್ತು ಸದಸ್ಯ ಎಚ್.ಎಂ. ರೇವಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು 17 ಜನ ಶಾಸಕರು ನೆಮ್ಮದಿಯಿಂದ ಇದಿವೋ, ಇಲ್ಲವೋ ಎಂಬುದರ ಬಗ್ಗೆ ಸೂಕ್ತ ವೇದಿಕೆಯಲ್ಲೇ ಉತ್ತರ ನೀಡುತ್ತೇವೆ ಎಂದು ತಿಳಿಸಿದರು


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ