ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು..? ಅನ್ನೋ ಚರ್ಚೆ ಆರಂಭವಾಗಿದ್ದು, ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಈ ಮಧ್ಯೆ ಸಿಎಂ ರೇಸ್ ನಲ್ಲಿರುವ ನಾಯಕರುಗಳ ಅಭಿಮಾನಿಗಳು ತರಹೇವಾರಿ ಘೋಷಣೆಗಳನ್ನು ಮೊಳಗಿಸುತ್ತಿದ್ದಾರೆ.
ಇದಕ್ಕೆ ತಾಜಾ ಉದಾಹರಣೆ ಮೈಸೂರಿನಲ್ಲಿ ನಡೆದಿರುವ ಘಟನೆ. ಹೌದು..! ಸಿದ್ದರಾಮಯ್ಯ ಮುಂದಿನ ಸಿಎಂ ಅಭ್ಯರ್ಥಿ ಎಂದು ಸಿದ್ದು ಅಭಿಮಾನಿಗಳು ಈಗಾಗಲೇ ಫಿಕ್ಸ್ ಆಗಿದ್ದು, ಎಲ್ಲೆಲ್ಲೂ ಅದನ್ನೇ ಹೇಳುತ್ತಿದ್ದಾರೆ.
ಈ ಮಧ್ಯೆ ಇಂದು ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ಕರ್ನಾಟಕದ ರಾಜಕೀಯ ಹುಲಿ ಸಿದ್ದರಾಮಯ್ಯ, ಚಾಮುಂಡೇಶ್ವರಿ ವರಪುತ್ರ ಸಿದ್ದರಾಮಯ್ಯ ಎಂದು ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೊಸ ಘೋಷಣೆ ಕೂಗಿದ್ದಾರೆ.
ಎರಡು ತಿಂಗಳಿನ ನಂತರ ಸಿದ್ದರಾಮಯ್ಯ ಮೈಸೂರಿಗೆ ಭೇಟಿ ನೀಡಿದ್ದು, ರಿಂಗ್ ರಸ್ತೆ ಬಳಿ ಸಿದ್ದರಾಮಯ್ಯರನ್ನು ಸ್ವಾಗತಿಸಲು ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಆಗಮಿಸಿದ್ದರು.
Laxmi News 24×7