Breaking News

ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ

Spread the love

ಹುಬ್ಬಳ್ಳಿ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ನಗರದ ಜನತಾ ಬಜಾರದಲ್ಲಿರುವ ಭಾಸ್ಕರ ರಾವ್ ಅವರ ಎಲುಬು ಕೀಲು ಮತ್ತು ಅಪಘಾತ ಚಿಕಿತ್ಸಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಉಣಕಲ್ ಗ್ರಾಮದ ಶಾಂತಮ್ಮ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ನಂತರ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ ಕಾರಣ ಎಂದು ಆರೋಪಿಸಿ ಹಲ್ಲೆಗೆ ಮುಂದಾಗಿದ್ದಾರೆ.

ಈ ವೇಳೆ ಸಂಬಂಧಿಕರ ಆಕ್ರೋಶ ಕಂಡು ಬೆದರಿದ ವೈದ್ಯರು ಮತ್ತು ಸಿಬ್ಬಂದಿ ಪಕ್ಕದಲ್ಲಿದ್ದ ಠಾಣೆಗೆ ಓಡಿ ಹೋಗಿ ರಕ್ಷಣೆ ಪಡೆದುಕೊಂಡಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸರು ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ