Breaking News

ಅಪ್ಪ-ಅಮ್ಮ ಇಲ್ಲದ ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬ ಮುಖ್ಯಮಂತ್ರಿ: ಈಶ್ವರಪ್ಪ ಲೇವಡಿ

Spread the love

ಬೆಂಗಳೂರು: ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬರಂತೆ ಐವರು ಮುಖ್ಯಮಂತ್ರಿಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಈ ಮಟ್ಟಕ್ಕೆ ಇಳಿಯಬಾರದಿತ್ತು’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಬೆಂಬಲಿಗ ಶಾಸಕರ ಬಾಯಿ ಮುಚ್ಚಿಸಲು ಸಿದ್ದರಾಮಯ್ಯ ಮುಂದಾಗಿಲ್ಲ. ಡಿ.ಕೆ. ಶಿವಕುಮಾರ್‌ ಕೂಡಾ ಯಾರ ಬಾಯಿಯನ್ನೂ ಮುಚ್ಚಿಸಿಲ್ಲ. ಎಂ.ಬಿ. ಪಾಟೀಲ ನಾನು ಸನ್ಯಾಸಿ ಅಲ್ಲ ಅಂತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಜಿ. ಪರಮೇಶ್ವರ, ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ತನ್ವೀರ್ ಸೇಠ್ ಹೇಳುತ್ತಿದ್ದಾರೆ. ಭಾವಿ ಮುಖ್ಯಮಂತ್ರಿ ವಿಷಯದಲ್ಲಿ ಕಾಂಗ್ರೆಸ್‌ನಲ್ಲಿ ಬಡಿದಾಟ ನಡೆಯುತ್ತಿದೆ’ ಎಂದರು.

ಇಂದು ಕಾಂಗ್ರೆಸ್‌ ಎಲ್ಲಿದೆ ಎಂದು ಹುಡುಕುವಂತಾಗಿದೆ. ರಾಜಸ್ಥಾನ, ಪಂಜಾಬ್‌ನಲ್ಲಿ ಸರಕಾರವಿರುವುದು ಬಿಟ್ಟರೆ ಕರ್ನಾಟಕದಲ್ಲಿ ಗೆದ್ದಿದ್ದ 70ಕ್ಕೂ ಹೆಚ್ಚು ಮಂದಿಯಲ್ಲಿ ಒಂದಿಷ್ಟು ಜನ ಬಿಟ್ಟು ಹೋಗಿದ್ದಾರೆ. ಕಾಂಗ್ರೆಸ್‌ ಜೀವವೇ ಹೋಗುತ್ತಿರುವ ಪರಿಸ್ಥಿತಿಯಲ್ಲಿ ಮುಂದಿನ ಸಿಎಂ ನಾನು ಎಂಬಂತೆ ಬಡಿದಾಡುಕೊಳ್ಳುತ್ತಿದ್ದಾರೆ. ಸಾಯುತ್ತಿರುವ ಕಾಂಗ್ರೆಸ್‌ ಉಳಿಸಲು ಯಾರಿಂದಲೂ ಸಾಧ್ಯವಿಲ್ಲ. ಇನ್ನು ಸಿಎಂ ಸ್ಥಾನ ಕನಸೇ ಸರಿ ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ