Breaking News

ಮದುವೆಯಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ರಸ್ತೆ ಅಪಘಾತ: ವಧು ಸಾವು, ವರನಿಗೆ ಗಂಭೀರ ಗಾಯ

Spread the love

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುವೆಯಾಗಿ ದೇವಸ್ಥಾನಕ್ಕೆ ಹೊರಟಿದ್ದ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟು, ಆಕೆಯ ಪತಿ ಸೇರಿ ಹಲವರು ಗಂಭೀರ ಗಾಯಗೊಂಡಿರುವ ದುರಂತ ಘಟನೆ ಜರುಗಿದೆ.

ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಬಳಿ ಟೆಂಪೋ ಹಾಗೂ ಕ್ರೂಸರ್ ಮಧ್ಯೆ‌ ಮುಖಾಮುಖಿ ಢಿಕ್ಕಿಯಾದ ಪರಿಣಾಮ ನವ ವಿವಾಹಿತೆ ರಾಣಿ ಗಣೇಶ್ ಚವ್ಹಾಣ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಮದುಮಗ ಗಣೇಶ ಚವ್ಹಾಣ ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

ಮದುವೆ ನಂತರ ಶಂಕರವಾಡಿ ಗ್ರಾಮದಿಂದ ಕೊಕಟನೂರ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಟೆಂಪೋ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ