Breaking News

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ

Spread the love

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ‌ ಬಂದ ವ್ಯಕ್ತಿಯಿಂದ ಸುಮಾರು ₹20.89 ಲಕ್ಷ ಮೌಲ್ಯ ಅಕ್ರಮ ಚಿನ್ನ ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ವಿಮಾನ‌ ನಿಲ್ದಾಣಕ್ಕೆ ಬಂದಿದ್ದಾನೆ. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಸ್ಟಮ್ಸ್‌ನ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ ಚಕ್ರವರ್ತಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ