Home / ರಾಜಕೀಯ / ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

Spread the love

ಚಿತ್ರದುರ್ಗ: ಅಪಘಾತಕ್ಕೀಡಾಗಿ ಮೃತಪಟ್ಟ ತಂಗಿಯ ಶವವನ್ನ ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗಮಧ್ಯೆ ದುರಂತ ಅಂತ್ಯ ಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹಾವೇರಿ ಜಿಲ್ಲೆಯ ಹಿರೇಕೆರೂರಿನ ರಾಮು ಮುದ್ದಿಗೌಡರ್(56) ಮತ್ತು ಇವರ ಸಹೋದರಿ ರೇಣುಕಾ ಮೃತರು. ಮೂರು ದಿನದ ಹಿಂದೆ ರೇಣುಕಾಗೆ ಅಪಘಾತವಾಗಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಮು ಕರೆದೊಯ್ದಿದ್ದರು. ಚಿಕಿತ್ಸೆ ಫಲಿಸದೆ ರೇಣುಕಾ ಗುರುವಾರ ಮೃತಪಟ್ಟಿದ್ದರು. ಮೃತದೇಹವನ್ನು ಆಂಬುಲೆನ್ಸ್​ನಲ್ಲಿ ತರುತ್ತಾ, ಕಾರಿನಲ್ಲಿ ರಾಮು ಹಿರೇಕೆರೂರಿಗೆ ಬರುತ್ತಿದ್ದರು.

ಮಾರ್ಗಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ರಾತ್ರಿ ಟಿಪ್ಪರ್ ಹಾಗೂ ರಾಮು ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಪ್ಪರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ರಾಮು ಗಂಬೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕಲಿಲ್ಲ. ರೇಣುಕಾಳ ಸಾವಿನ ಸುದ್ದಿಯನ್ನೇ ಅರಗಿಸಿಕೊಳ್ಳದೆ ಕಣ್ಣೀರು ಹಾಕುತ್ತಿದ್ದ ಕುಟುಂಬ ರಾಮು ಸಾವಿನ ಸುದ್ದಿ ಕೇಳಿ ಕಂಗಾಲಾಗಿದೆ.

ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮು, ಹಿರೇಕೆರೂರು ತಾಲೂಕು ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಹಿರೇಕೆರೂರ ತಾಲೂಕು ಕಸಾಪ ಅಧ್ಯಕ್ಷರಾಗಿದ್ದ ರಾಮು, ಹಿರೇಮೊರಬ ಗ್ರಾಮದ ವಿಎಸ್‌ಎಸ್ ಬ್ಯಾಂಕ್‌ನ ಅಧ್ಯಕ್ಷರಾಗಿ, ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಕೆಲಸ ಮಾಡುತ್ತಿದ್ದರು.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ