Breaking News

ಕೇಂದ್ರ ಜಿಎಸ್‌ಟಿ ಪರಿಹಾರ ವಂಚಿಸಿರುವಾಗ ರಾಜ್ಯಗಳು ಸಂಭ್ರಮಿಸಬೇಕೆ?: H.D.K.

Spread the love

ಬೆಂಗಳೂರು: ಜಿಎಸ್‌ಟಿ ಜಾರಿಗೆ ಬಂದು 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. ಜಿಎಸ್‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ ₹9 ಸಾವಿರ ಕೋಟಿಯಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಕೇಂದ್ರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು ಜಿಎಸ್‌ಟಿಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ಅನ್ನು ಜಿಎಸ್‌ಟಿಗೆ ಸೇರಿಸದಂತೆ ಹೋರಾಡುವಂತಾಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ