Breaking News

ಮಾನಕ್ಕೆ ಹಾನಿ ವರದಿ ಪ್ರಕಟಿಸದಂತೆ ಕೇಂದ್ರ ಸಚಿವ ಡಿವಿಎಸ್‌ ತಡೆಯಾಜ್ಞೆ

Spread the love

ಬೆಂಗಳೂರು: ತಮ್ಮ ಮಾನಕ್ಕೆ ಹಾನಿ ತರುವ ಯಾವುದೇ ಸುದ್ದಿಯನ್ನು ಪ್ರಕಟಿಸಬಾರದು ಎಂದು ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದು ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಹಿಂದೆ ಬಿಜೆಪಿಯ ರಮೇಶ ಜಾರಕಿಹೊಳಿ ವಿರುದ್ಧ ಸಿ.ಡಿ ಬಿಡುಗಡೆ ಮಾಡಿದ್ದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಅದರ ಬೆನ್ನಲ್ಲೇ ಹಲವು ಸಚಿವರು ತಮ್ಮ ವಿರುದ್ಧ ಸಿ.ಡಿ ಬಿಡುಗಡೆ ಆಗಬಹುದು ಎಂಬ ಭೀತಿಯಿಂದ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಇದೀಗ ಸದಾನಂದ ಗೌಡ ಅವರು ಎಲ್ಲ ಪತ್ರಿಕೆ ಮತ್ತು ಸುದ್ದಿ ವಾಹಿನಿಗಳ ಹೆಸರಿನಲ್ಲಿ ತಡೆಯಾಜ್ಞೆ ತಂದಿದ್ದಾರೆ.

‘ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವಯಕ್ತಿಕ ತೇಜೋವಧೆಗೆ ಪ್ರಯತ್ನಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ‌ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು’ ಎಂದು ಸದಾನಂದ ಗೌಡ ಟಿಟ್ಟರ್‌ನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

‘I Am god’ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ….ಯುವ ಪ್ರತಿಭೆ ರವಿ ಗೌಡ ಹೊಸ ಸಿನಿಮಾಗೆ ಸಾಥ್.

Spread the loveಬೆಂಗಳೂರು:ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ಅವರು ತಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ