Breaking News
Home / ಹುಬ್ಬಳ್ಳಿ / ನೌಕರಿ ತೊರೆದು ಸಾವಯವ ರೈತರಾದ ಎಂಜಿನಿಯರಿಂಗ್‌ ಕಾಲೇಜು ಪ್ರಾಚಾರ್ಯ

ನೌಕರಿ ತೊರೆದು ಸಾವಯವ ರೈತರಾದ ಎಂಜಿನಿಯರಿಂಗ್‌ ಕಾಲೇಜು ಪ್ರಾಚಾರ್ಯ

Spread the love

ಹುಬ್ಬಳ್ಳಿ: ಸಾವಯವ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಪತ್ನಿಯ ಉತ್ಸಾಹದಿಂದ ಪ್ರೇರಣೆ ಪಡೆದ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲರೊಬ್ಬರು ಸಾವ ಯವ ಕೃಷಿಕರಾಗಿ ಯಶಸ್ವಿ ಹೆಜ್ಜೆಗಳನ್ನಿರಿಸಿದ್ದಾರೆ. ಸಾವಯವ ಪದ್ಧತಿಯಲ್ಲಿ ಬೆಳೆದ ತರಕಾರಿ ಇನ್ನಿತರ ಉತ್ಪನ್ನಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ.

ಇಲ್ಲಿನ ಬಿ.ವಿ. ಭೂಮರಡ್ಡಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ, ಗದುಗಿನ ತೋಂಟದಾರ್ಯ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ| ಪ್ರಕಾಶ ಹುಬ್ಬಳ್ಳಿ ಅವರು ಹುದ್ದೆ ತೊರೆದು ಕೃಷಿಯಲ್ಲಿ ತೊಡಗಿ ಸಾವಯವ ಕೃಷಿಯ ಮಹತ್ವ ಸಾರುತ್ತಿದ್ದಾರೆ. ಪತ್ನಿ ಕುಸುಮಾ ಹುಬ್ಬಳ್ಳಿ ಅವರು ಸಾವಯವ ಕೃಷಿಯಲ್ಲಿ ಹೊಂದಿದ ಆಸಕ್ತಿಯಿಂದ ಪ್ರಭಾವಿತರಾಗಿ ಪ್ರಾಚಾರ್ಯ ಹುದ್ದೆ ತೊರೆದಿದ್ದು, ದಂಪತಿಯಿಬ್ಬರೂ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಒಟ್ಟು 4 ಎಕರೆ ಜಮೀನಿನಲ್ಲಿ ತರಕಾರಿ ಬೆಳೆಯುವ ಮೂಲಕ ಸಾವಯವ ಬೇಸಾಯ ಪ್ರಾರಂಭಿಸಿದ್ದಾರೆ.

ಆನ್‌ ಲೈನ್‌ ಮತ್ತು ವಾಟ್ಸ್‌ಆಯಪ್‌ ಮೂಲಕ ಆರ್ಡರ್‌ ಪಡೆದುಕೊಂಡು ಹುಬ್ಬಳ್ಳಿ ನಗರದ ಗ್ರಾಹಕರ ಮನೆ ಬಾಗಿಲಿಗೆ ಗುಣಮಟ್ಟದ ತರಕಾರಿಗಳನ್ನು ತಮ್ಮ “ನೇಚರ್‌ಫÓr. ಫಾರ್ಮ್’ ಮೂಲಕ ಸರಬರಾಜು ಮಾಡುತ್ತಿದ್ದಾರೆ. ಮಾಹಿತಿ ಯುಗದ ತಂತ್ರಾಂಶಗಳ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

40 ಬಗೆಯ ದೇಶಿ ಹಾಗೂ 15 ಬಗೆಯ ವಿದೇಶಿ ತರಕಾರಿ ಬೆಳೆಯುತ್ತಿದ್ದು, ಜಮೀನಿನಲ್ಲಿ ನಾಟಿ ಮಾಡುವುದರಿಂದ ಹಿಡಿದು ಕಟಾವು ಮಾಡುವವರೆಗೆ ಬೆಳೆಯ ಪೋಷಣೆ ಮತ್ತು ಸಂರಕ್ಷಣೆಯನ್ನು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಎರೆಹುಳು ಗೊಬ್ಬರ, ಬೇವಿನ ಹಿಂಡಿ ,ಬೇವಿನ ಎಣ್ಣೆ, ಬೇವಿನ ಅಸ್ತ್ರ , ಅಗ್ನಿ ಅಸ್ತ್ರ , ಹುಳಿ ಮಜ್ಜಿಗೆ, ಕೀಟಗಳ ನಿರ್ವಹಣೆಗೆ ಸ್ಟಿಕಿ ಟ್ರಾÂಪ್‌, ಲೈಟ್‌ ಟ್ರಾಪ್‌ ವಿಧಾನ ಅನುಸರಿಸುತ್ತಿದ್ದಾರೆ.

ತೋಟಗಾರಿಕೆ ಉಪನಿರ್ದೇಶಕ ಕಾಶಿನಾಥ ಭದ್ರುನವರ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಹಾಂತೇಶ ಪಟ್ಟಣಶೆಟ್ಟಿ, ಸಹಾಯಕ ತೋಟಗಾರಿಕೆ ಅಧಿಕಾರಿ ಕೆ.ವಿ. ಅಂಗಡಿ ಅವರ ಮಾರ್ಗದರ್ಶನದಲ್ಲಿ ತೋಟಗಾರಿಕೆ ಇಲಾಖೆ ಯೋಜನೆಗಳಾದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಯೋಜನೆಯಡಿ ಹೊದಿಕೆ ಮತ್ತು ಐಐಎಚ್‌ಆರ್‌ ತರಕಾರಿ ಸ್ಪೆಷಲ್‌ ಸೌಲಭ್ಯಗಳನ್ನು ಪಡೆದಿದ್ದಾರೆ.


Spread the love

About Laxminews 24x7

Check Also

ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ

Spread the love ಧಾರವಾಡ : ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ