Breaking News
Home / ಜಿಲ್ಲೆ / ಬೆಂಗಳೂರು / 2011ರ ಕೆಪಿಎಸ್ಸಿ ನೇಮಕಾತಿ ರದ್ದು: ಹಿಂಪಡೆಯಲು ಆಗ್ರಹ

2011ರ ಕೆಪಿಎಸ್ಸಿ ನೇಮಕಾತಿ ರದ್ದು: ಹಿಂಪಡೆಯಲು ಆಗ್ರಹ

Spread the love

ಬೆಂಗಳೂರು: 2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನೇ ರದ್ದುಗೊಳಿಸಿ 2014ರ ಆಗಸ್ಟ್ 14ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆದು, ಆಯ್ಕೆಯಾದ ಎಲ್ಲ ಅಭ್ಯರ್ಥಿಗಳಿಗೂ ನೇಮಕಾತಿ ಆದೇಶ ವಿತರಿಸುವಂತೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಹಲವು ಸದಸ್ಯರು ರಾಷ್ಟ್ರಪತಿ ರಮಾನಾಥ ಕೋವಿಂದ್‌ ಅವರಿಗೆ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್‌ ಸದಸ್ಯರಾದ ಪಿ.ಆರ್‌. ರಮೇಶ್‌, ಆಯನೂರು ಮಂಜುನಾಥ, ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ. ಕುಮಾರಸ್ವಾಮಿ, ಶಾಸಕರಾದ ಈಶ್ವರ ಖಂಡ್ರೆ, ಎ.ಟಿ. ರಾಮಸ್ವಾಮಿ, ಆರಗ ಜ್ಞಾನೇಂದ್ರ, ರಾಜಾ ವೆಂಕಟಪ್ಪ ನಾಯಕ, ಅಖಂಡ ಶ್ರೀನಿವಾಸ ಮೂರ್ತಿ, ಕೆ.ಬಿ. ಅಶೋಕ ನಾಯ್ಕ, ಎನ್‌. ಮಹೇಶ್‌, ವಿಧಾನ ಪರಿಷತ್‌ ಸದಸ್ಯರಾದ ಆರ್‌. ಧರ್ಮಸೇನ, ಯು.ಬಿ. ವೆಂಕಟೇಶ್, ಮೋಹನ್‌ ಕುಮಾರ್‌ ಕೊಂಡಜ್ಜಿ, ವಿವೇಕರಾವ್‌ ವ. ಪಾಟೀಲ, ಕೆ.ಟಿ. ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಎನ್‌. ಅಪ್ಪಾಜಿ ಗೌಡ ಮತ್ತು ನಜೀರ್‌ ಅಹ್ಮದ್‌ ಈ ಮನವಿಗೆ ಸಹಿ ಮಾಡಿದ್ದಾರೆ.

‘2011ರ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪ್ರಕ್ರಿಯೆಯ ವಿಚಾರದಲ್ಲಿ ಸಂವಿಧಾನದ ಉಲ್ಲಂಘನೆ ಆಗಿದೆ. ಸಂವಿಧಾನಕ್ಕೆ ವಿರುದ್ಧವಾಗಿ ಇಡೀ ಪ್ರಕ್ರಿಯೆಯನ್ನೇ ರದ್ದು ಮಾಡಲಾಗಿದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಲ್ಲ. ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಆಯ್ಕೆಯಾದ ಎಲ್ಲ ಅಭ್ಯರ್ಥಿಗಳಿಗೂ 2017ರ ಮಾರ್ಚ್‌ 17ರ ಆದೇಶದಂತೆ ನೇಮಕಾತಿ ಆದೇಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆಯ ಅಧಿಸೂಚನೆಯನ್ನು ಹಿಂಪಡೆಯುವ ಸಂದರ್ಭದಲ್ಲಿ ನಿರಂತರವಾಗಿ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಾಗಿದೆ. ಸಂವಿಧಾನದ ವಿಧಿ 323(2)ರ ಪ್ರಕಾರ, ಲೋಕಸೇವಾ ಆಯೋಗದ ಕಾರ್ಯನಿರ್ವಹಣಾ ವರದಿಯನ್ನು ವಿಧಾನ ಮಂಡಲದ ಮುಂದೆ ಮಂಡಿಸಬೇಕಿತ್ತು. ಆದರೆ, 2011ರ ಗೆಜೆಟೆಡ್‌ ಪ್ರೊಬೇಷನರಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ವರದಿಯನ್ನು ಪೂರ್ಣ ಪ್ರಮಾಣದಲ್ಲಿ ವಿಧಾನಮಂಡಲದ ಮುಂದೆ ಮಂಡಿಸಿರಲಿಲ್ಲ. ಆದರೂ, ‘ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಲಾಗಿತ್ತು’ ಎಂದು 2020ರ ಬಜೆಟ್‌ ಅಧಿವೇಶನದ ವೇಳೆ ಮುಖ್ಯಮಂತ್ರಿಯವರು ವಿಧಾನಮಂಡಲದಲ್ಲೇ ಸುಳ್ಳು ಹೇಳಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ.

‘ಈ ಪ್ರಕರಣದಲ್ಲಿ ಸಂವಿಧಾನಾತ್ಮಕ ಕರ್ತವ್ಯಗಳನ್ನು ನಿರ್ವಹಿಸಲಾಗಿದೆ’ ಎಂದು ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಹಾಗೂ ಹೈಕೋರ್ಟ್‌ಗಳಿಗೆ ತಪ್ಪು ಮಾಹಿತಿ ನೀಡಲಾಗಿತ್ತು. ಕೆಪಿಎಸ್‌ಸಿ ಸದಸ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಕೋರಿದ್ದ ಕಡತವನ್ನು ವಾಪಸು ಕಳುಹಿಸಿದ ರಾಜ್ಯಪಾಲರು, ಉಲ್ಲೇಖಿಸಿದ್ದ ಅಭಿಪ್ರಾಯವನ್ನೂ ನ್ಯಾಯಾಲಯಕ್ಕೆ ತಿಳಿಸದೇ ಮುಚ್ಚಿಡಲಾಗಿತ್ತು ಎಂದು ಆರೋಪಿಸಲಾಗಿದೆ.

ಸಿಐಡಿ ಸಲ್ಲಿಸಿದ ಮಧ್ಯಂತರ ವರದಿಯನ್ನಷ್ಟೇ ಆಧರಿಸಿ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ. ಪ್ರತಿ ಅಭ್ಯರ್ಥಿಯ ಅಪರಾಧಿಕ ಹಿನ್ನೆಲೆ, ಅರ್ಹತೆ ಪರಿಶೀಲಿಸುವ ಎಲ್ಲ ಅಧಿಕಾರವೂ ಆಯೋಗದ ಬಳಿಯೇ ಇತ್ತು. ಅದನ್ನು ಬಳಸಿಲ್ಲ. ನ್ಯಾಯಾಲಯ, ವಿಧಾನಮಂಡಲ ಎಲ್ಲವನ್ನೂ ಲಘುವಾಗಿ ಪರಿಗಣಿಸಿ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಾಸಕರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ