ಮೈಸೂರು: ಮತ್ತೆ ನಾಯಕತ್ವ ಬದಲಾವಣೆಯ ಬಗ್ಗೆ ಸಚಿವ ಸಿ.ಪಿ ಯೋಗೇಶ್ವರ್ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಆದರೆ, ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.
ಜನರು ದೇಗುಲಕ್ಕೆ ಹೋದರೆ ರಾಜಗೋಪುರಕ್ಕೆ ಕೈಮುಗಿಯುತ್ತಾರೆ. ರಾಜಗೋಪುರದ ಕೆಳಗಿನ ಚಪ್ಪಡಿ ಕಲ್ಲುಗಳು ಜನರಿಗೆ ಕಾಣುವುದಿಲ್ಲ. ಚಪ್ಪಡಿ ಕಲ್ಲಿನ ಮೇಲೆ ಚಪ್ಪಲಿ ಬಿಟ್ಟು, ರಾಜಗೋಪುರ ನೋಡುತ್ತಾರೆ. ನಮ್ಮ ಸ್ಥಿತಿ ಚಪ್ಪಡಿ ಕಲ್ಲಿನಂತೆ ಆಗಿದೆ ಎಂದು ಯೋಗೇಶ್ವರ್ ತಿಳಿಸಿದ್ದಾರೆ.
ನಮ್ಮದೇ ಸರ್ಕಾರವಿದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ. ಹಳೆಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿಲ್ಲ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮೀಸಲಾತಿ ಪ್ರತಿ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ಪ್ರಕಟಿಸಲಾಗಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೆಸರು ಉಲ್ಲೇಖಿಸಿ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.