Breaking News
Home / ರಾಜಕೀಯ / ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ

Spread the love

ಹುಬ್ಬಳ್ಳಿ: ಸರ್ಕಾರ ಲಾಕ್‌ಡೌನ್ ಅನ್ನು ಮತ್ತಷ್ಟು ಸಡಿಲಿಕೆ ಮಾಡಿರುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ಆಸನಗಳ ಭರ್ತಿಯೊಂದಿಗೆ ಕಾರ್ಯಾಚರಣೆ ನಡೆಸಲಿದೆ.

‘ಲಾಕ್‌ಡೌನ್‌ನಿಂದಾಗಿ ಸೇವೆ ಸ್ಥಗಿತಗೊಳಿಸಿದ್ದ ಸಂಸ್ಥೆಯು ಭಾಗಶಃ ಅನ್‌ಲಾಕ್‌ ಬಳಿಕ, ಜೂನ್ 21ರಿಂದ ಶೇ 50ರಷ್ಟು ಆಸನಗಳ ಭರ್ತಿಯೊಂದಿಗೆ ಸೇವೆ ಆರಂಭಿಸಿತ್ತು. ಇದೀಗ ಆಸನಗಳ ಭರ್ತಿಗೆ ಯಾವುದೇ ಮಿತಿ ಇಲ್ಲ. ವ್ಯಾಪಾರ ವಹಿವಾಟು ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೂ ಅವಕಾಶ ನೀಡಿರುವುದರಿಂದ, ಜನರ ಓಡಾಟ ಹೆಚ್ಚಾಗಲಿದ್ದು ಸಂಸ್ಥೆಯ ಆದಾಯವೂ ಚೇತರಿಸಿಕೊಳ್ಳಲಿದೆ’ ಎಂದು ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಸೇವೆ ವಿಸ್ತರಣೆ:

‘ಹಳ್ಳಿಗಳಿಗೆ ಮತ್ತು ಹೊರಜಿಲ್ಲೆಗಳಿಗೆ ಬಸ್ ಸೇವೆ ವಿಸ್ತರಿಸಲಾಗಿದೆ. ಬೆಳಗಾವಿ, ಗದಗ, ಹಾವೇರಿ, ಶಿರಹಟ್ಟಿ, ಕಲಘಟಗಿ ಕುಂದಗೋಳ, ತಡಸ, ಲಕ್ಷ್ಮೇಶ್ವರ, ಹಾನಗಲ್ ಮುಂತಾದ ಸ್ಥಳಗಳಿಗೆ ನಿರಂತರವಾಗಿ ಬಸ್ಸುಗಳನ್ನು ಬಿಡಲಾಗುತ್ತದೆ. ವಿಜಯಪುರ, ಬಾಗಲಕೋಟೆ, ದಾವಣಗೆರೆ ಮತ್ತಿತರ ಜಿಲ್ಲೆಗಳಿಗೆ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು’ ಎಂದಿದ್ದಾರೆ.

‘ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ವಿಧಿಸಲಾಗಿದ್ದರೂ, ಬಸ್ ಸಂಚಾರಕ್ಕೆ ನಿರ್ಬಂಧವಿಲ್ಲ. ದೂರ ಮಾರ್ಗದ ಬಸ್‌ಗಳ ಸಂಚಾರ ದಿನಪೂರ್ತಿ ಲಭ್ಯವಿರುತ್ತದೆ. ಜನ ತಮ್ಮ ಪ್ರಯಾಣ ಟಿಕೆಟ್, ಅಧಿಕೃತ ದಾಖಲೆ ಹಾಗೂ ಗುರುತಿನ ಪತ್ರದೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸುತ್ತಾ ನಿರಾತಂಕವಾಗಿ ಪ್ರಯಾಣಿಸಬಹುದು’ ಎಂದು ತಿಳಿಸಿದ್ದಾರೆ.

ಪೂರ್ಣ ಆಸನಗಳ ಭರ್ತಿಯೊಂದಿಗೆ ಬಸ್ ಸಂಚಾರಕ್ಕೆ ಅವಕಾಶ ನೀಡಿದ ಬೆನ್ನಲ್ಲೇ, ಮುನ್ನೆಚ್ಚರಿಕೆ ಕ್ರಮವಾಗಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಹೊಸೂರು, ಗೋಕುಲ ರಸ್ತೆ ಬಸ್ ನಿಲ್ದಾಣ, ಕುಂದಗೋಳ, ಕಲಘಟಗಿ, ನವಲಗುಂದ, ಅಣ್ಣಿಗೇರಿ ಬಸ್ ನಿಲ್ದಾಣಗಳನ್ನು ಸ್ವಚ್ಚಗೊಳಿಸಿ ಸ್ಯಾನಿಟೈಸ್ ಮಾಡಲಾಯಿತು. ನಿತ್ಯ ಸಂಚಾರ ಮುಗಿಸಿ ಡಿಪೋಗಳಿಗೆ ಹಿಂದಿರುಗುವ ಬಸ್‌ಗಳಿಗೂ ಸ್ಯಾನಿಟೈಸ್ ಮಾಡಲಾಗುತ್ತಿದೆ.

‘₹24 ಲಕ್ಷ ಆದಾಯ ಸಂಗ್ರಹ’

‘ಕಳೆದ ವಾರ ಹುಬ್ಬಳ್ಳಿ ವಿಭಾಗದಲ್ಲಿ ನಿತ್ಯ ಸುಮಾರು 255 ಬಸ್‌ಗಳು ಸಂಚರಿಸಿದ್ದು, 44 ಸಾವಿರಕ್ಕೂ ಹೆಚ್ಚು ಜನ ಪ್ರಯಾಣಿಸಿದ್ದಾರೆ. ಸಂಸ್ಥೆಗೆ ನಿತ್ಯ ಅಂದಾಜು ₹24 ಲಕ್ಷ ಆದಾಯ ಸಂಗ್ರಹವಾಗಿದೆ. ಈಗ ವಾಣಿಜ್ಯ ವ್ಯವಹಾರಗಳ ಅವಧಿಯನ್ನು ರಾತ್ರಿ 9ರವರೆಗೆ ಹೆಚ್ಚಿಸಲಾಗಿದ್ದು, ಮತ್ತಷ್ಟು ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಲಿದೆ’ ಎಂದು ಎಚ್. ರಾಮನಗೌಡರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಕೋವಿಡ್‌ಗೂ ಮುಂಚೆ ಅಂತರ ಜಿಲ್ಲೆಗಳು ಹಾಗೂ ಅಂತರ ರಾಜ್ಯಗಳ ಪ್ರಮುಖ ಸ್ಥಳಗಳಿಗೆ ನಿರ್ಬಂಧವಿಲ್ಲದೆ ದಿನದ 24 ಗಂಟೆಯೂ ಬಸ್ಸುಗಳು ಸಂಚರಿಸುತ್ತಿದ್ದವು. ವಿವಿಧ ರಿಯಾಯಿತಿ ಪಾಸ್‌ಗಳ ಪ್ರಯಾಣಿಕರು ಸೇರಿದಂತೆ ಸುಮಾರು 1.45 ಲಕ್ಷ ಜನ ಹಾಗೂ 45 ಸಾವಿರದಷ್ಟು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಸಂಸ್ಥೆಗೆ ನಿತ್ಯ ಅಂದಾಜು ₹55 ಲಕ್ಷ ಆದಾಯ ಸಂಗ್ರಹವಾಗುತ್ತಿತ್ತು’ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ