ಬೆಳಗಾವಿ: ಜಿಲ್ಲೆಯಲ್ಲಿಂದು ಮಾರಕ ಕೊರೊನಾ ರಣಕೇಕೆ ಮುಂದುವರೆದಿದ್ದು,ಬುಧವಾರ ಒಂದೇ ದಿನಕ್ಕೆ 293 ಹೊಸ ಕೇಸ್ ಪತ್ತೆಯಾಗಿವೆ. ನಾಲ್ಕು ಜನರು ಬಲಿಯಾಗಿದ್ದಾರೆ.
ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್‍ನಲ್ಲಿ ಮಾಹಿತಿ ನೀಡಿದ್ದು, 293 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4221ಕ್ಕೆ ಏರಿಕೆಯಾಗಿದೆ.
ಇನ್ನೂ ಜಿಲ್ಲೆಯಲ್ಲಿ ನಾಲ್ಕು ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 90ಕ್ಕೆ ಹೆಚ್ಚಳವಾಗಿದೆ.
ಇಲ್ಲಿಯವರೆಗೂ 1162 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2969 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 112 ಜನರ ಕೊರೊನಾ ರಿಪೋರ್ಟ್ ಬರಬೇಕಿದೆ.