Breaking News

ಮೋದಿ ಎದುರು ಮೇಕೆದಾಟು ಬಗ್ಗೆ ಮಾತನಾಡುವ ಶಕ್ತಿ ಬಿಜೆಪಿಯವರಿಗೆ ಇಲ್ಲ : ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

Spread the love

ರಾಮನಗರ : ಕೇಂದ್ರ – ರಾಜ್ಯ ವಿರುದ್ಧ ಕಾಂಗ್ರೆಸ್​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ರಾಮನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಿ‌.ಕೆ.ಸುರೇಶ್ ಮೇಕೆದಾಟು ಯೋಜನೆ ವಿಚಾರವಾಗಿ ಕೆಂಡಕಾರಿದ್ದಾರೆ. ರಾಜ್ಯದ ಯಾವ ಸಂಸದರಿಗೂ, ಸಚಿವರಿಗೂ ಪ್ರಧಾನಿ ಮೋದಿ ಎದುರು ಯೋಜನೆ ಬಗ್ಗೆ ಪ್ರಸ್ತಾಪ ಮಾಡುವ ಶಕ್ತಿಯಿಲ್ಲ. ನಿಷ್ಕ್ರಿಯರಾಗಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಹಸಿರು ಪೀಠ ಈಗಾಗಲೇ ಯೋಜನೆಗೆ ಅಸ್ತು ಎಂದಿದೆ. ಆದರೆ ಈ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಕೊಡಬೇಕಿದೆ, ಆದರೆ ರಾಜಕೀಯ ಕಾರಣದಿಂದ ಈ ಯೋಜನೆ ಬಗ್ಗೆ ಯಾರು ಚಕಾರ ಎತ್ತುತ್ತಿಲ್ಲ ಎಂದು ಕಿಡಿಕಾರಿದರು. ಇನ್ನು ತಮಿಳುನಾಡು ಸಿಎಂ ಸ್ಟಾಲಿನ್ ಈ ಬಗ್ಗೆ ವಿರೋಧ ಮಾಡಿದ್ರೆ ಅದು ಗೊತ್ತಿಲ್ಲ.

ರಾಜ್ಯದ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರದ ನಾಯಕರು ಈ ಬಗ್ಗೆ ಮಾತನಾಡಲಿ. ಎರಡೂ ಕಡೆ ನಮ್ಮ ಸರ್ಕಾರ ಇದ್ದರೆ ಕೆಲಸ ಮಾಡಲು ಅನುಕೂಲ ಎನ್ನುತ್ತಿದ್ದರು. ಈಗ ಎರಡೂ ಕಡೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ, ಈ ಯೋಜನೆ ಮಾಡಲಿ ಎಂದು ತಿಳಿಸಿದರು.

ಇನ್ನು ಈ ಹಿಂದೆಯೇ ಯೋಜನೆಯ DPR ಸಿದ್ಧವಾಗಿದೆ. ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಕೇಂದ್ರಕ್ಕೆ ಕಳುಹಿಸಿದ್ದಾರೆ. ಆದರೆ ಈವರೆಗೆ ಮೇಕೆದಾಟು ವಿಚಾರವಾಗಿ ಯಾವುದೇ ಪ್ರಕ್ರಿಯೆ ನಡೆದಿಲ್ಲ.

ಈಗಲಾದರೂ ಮೇಕೆದಾಟು ಯೋಜನೆಯನ್ನ ಜಾರಿ ಮಾಡಲಿ ಎಂದು ರಾಮನಗರದಲ್ಲಿ ಸಂಸದ ಡಿ.ಕೆ.ಸುರೇಶ್ ಕೇಂದ್ರ – ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
*ಕ.ಕ.ಜ.ವೇ ಯಿಂದ ಮೇಕೆದಾಟು ಯೋಜನೆಗಾಗಿ ಪ್ರತಿಭಟನೆ*
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕಾವೇರಿ ಸರ್ಕಲ್ ನಲ್ಲಿ ಹೋರಾಟ ನಡೆಸಿದ ಕಾರ್ಯಕರ್ತರು ತಮಿಳುನಾಡು ಸಿಎಂ ಸ್ಟಾಲಿನ್ ಗೆ ಮನವಿ ಮಾಡಿದರು. ಮೇಕೆದಾಟು ಯೋಜನೆಗೆ ಅಡ್ಡಿಪಡಿಸದಂತೆ ಮನವಿ ಮಾಡಿದ ಕಾರ್ಯಕರ್ತರುತಮಿಳುನಾಡು ಸಿಎಂ ಗೆ ಸನ್ಮಾನ ಮಾಡುವುದಾಗಿ ತಿಳಿಸಿದರು. ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತ್ಱತ್ವದಲ್ಲಿ ನಡೆದ ಹೋರಾಟದಲ್ಲಿ ತಮಿಳುನಾಡಿನ ನಡೆಗೆ ಧಿಕ್ಕಾರ ಕೂಗಲಾಯಿತು. ಯೋಜನೆ ಗೆ ಅಡ್ಡಿಪಡಿಸದಂತೆ ಮನವಿ ಮಾಡಿದ ಪ್ರತಿಭಟನಾಕಾರರು ತಮಿಳುನಾಡು ಸಿಎಂ ಸ್ಟಾಲಿನ್ ಗೆ ಸನ್ಮಾನ ಮಾಡಲು ನಿರ್ಧಾರ ಮಾಡಲಾಗಿದೆ.

ಮುಂದಿನ ತಿಂಗಳು ಚೆನೈಗೆ ಹೋಗಿ ಸ್ಟಾಲಿನ್ ಗೆ ಸನ್ಮಾನ ಮಾಡಲು ನಿರ್ಧಾರ ಮಾಡಿದ್ದೇವೆ.

ಈ ಬಗ್ಗೆ ಸಿಎಂ ಯಡಿಯೂರಪ್ಪ, ಡಿ.ಕೆ.ಶಿವಕುಮಾರ್, ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಅಶ್ವಥ್ ನಾರಾಯಣ ನಿಯೋಗ ಹೋಗಬೇಕು. ತಮಿಳುನಾಡು ಸಿಎಂ ಜೊತೆಗೆ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದರು.ಕಳೆದ ಬಾರಿಯ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿಯೂ ಸಹ ಜಲಸಂಪನ್ಮೂಲ ಸಚಿವರಾಗಿದ್ದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಸಹ ಈ ಯೋಜನೆಗಾಗಿ ‌ಸಾಕಷ್ಟು ಹೋರಾಟ ನಡೆಸಿದ್ದರು. ಯೋಜನೆಯ ಸಂಪೂರ್ಣ ವರದಿಯನ್ನ ಕೇಂದ್ರಕ್ಕೂ ಕಳುಹಿಸಿಕೊಟ್ಟಿದ್ದರು. ಜೊತೆಗೆ ಸ್ವತಃ ಇಲಾಖೆಯ ಅಧಿಕಾರಿಗಳ ಜೊತೆಗೆ ಮೇಕೆದಾಟು ವಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆಯನ್ನ ನಡೆಸಿದ್ದ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದರೆ ಇನ್ನೊಂದು ವರ್ಷದಲ್ಲಿ ಯೋಜನೆ ಪ್ರಾರಂಭವಾಗಲಿದೆ ಎಂದು ಭರವಸೆ ನೀಡಿದ್ದರು.‌ ಆದರೆ ಅಷ್ಟರಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ಕಳೆದುಕೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆ ಯೋಜನೆ ಹಳ್ಳಹಿಡಿಯಿತು.‌

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ